ಶಿವಮೊಗ್ಗ: ರಾಜ್ಯದಲ್ಲಿ ಆಕಾಲಿಕ ಮಳೆಯಿಂದ ಜಲಕಂಟಕ ಎದುರಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಜಡೆ ಸಂಸ್ಥಾನ ಮಠದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ದೇಶದಲ್ಲಿ ಸಕಾಲಿಕವಾಗಿ ಮಳೆಯಾಗದೆ ಹೋದರೂ ಅಕಾಲಿಕವಾಗಿ ಸುರಿಯುವ ಮಳೆಯಿಂದಾಗಿ ಜಲಕಂಟಕ ಎದುರಾಗಲಿದೆ. ಮಳೆ, ಗುಡುಗು ಮತ್ತು ಸಿಡಿಲಿನ ಆರ್ಭಟ ಹೆಚ್ಚಾಗಲಿದೆ.
ಮಳೆಗಾಲದ ನಿಗದಿತ ಅವಧಿಯಲ್ಲಿ ಮಳೆಯಾಗದೆ ಅನಿರೀಕ್ಷಿತ ಸಮಯದಲ್ಲಿ ಸುರಿಯುವ ಮಳೆಯು ಗಂಭೀರ ಪರಿಣಾಮ ಬೀರಲಿದೆ ಎಂದರು.ಇದನ್ನು ಓದಿ –ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
ರಾಜ್ಯ ಮತ್ತು ದೇಶದ ರಾಜಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ ಶ್ರೀಗಳು, ಅರಸನ ಅರಮನೆ ಕಳೆಗುಂದಿತು ಮತ್ತು ಪಟ್ಟದ ಆನೆ ಗಾಂಭೀರ್ಯದಿAದ ನಡೆದೀತು ಎಂಬ ಅವರ ಮಾರ್ಮಿಕ ನುಡಿಗಳು ರಾಜಕೀಯ ವಲಯದಲ್ಲಿ ಹಲವು ಅರ್ಥಗಳನ್ನು ಕಲ್ಪಿಸುತ್ತಿವೆ. ಅಧಿಕಾರ ಕೇಂದ್ರಗಳಲ್ಲಿ ಬದಲಾವಣೆ ಅಥವಾ ಪ್ರಭಾವಿ ವ್ಯಕ್ತಿಗಳ ವರ್ಚಸ್ಸಿನಲ್ಲಿ ಏರುಪೇರಾಗುವ ಮುನ್ಸೂಚನೆಯನ್ನು ಈ ಸಾಲುಗಳು ನೀಡುತ್ತಿವೆ.








