ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್–ಯುಜಿ 2026 ಮರು ಪರೀಕ್ಷೆಯನ್ನು ಜೂನ್ 21ರಂದು ನಡೆಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಲಾಗಿದೆ.
ಇದನ್ನು ಓದಿ –ಸಂಪುಟ ಪುನಾರಚನೆ ಅಗತ್ಯ: ಸಿದ್ದರಾಮಯ್ಯ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಎನ್‌ಟಿಎಯ ಅಧಿಕೃತ ವೆಬ್‌ಸೈಟ್ ಮತ್ತು ಸಾಮಾಜಿಕ ಜಾಲತಾಣಗಳನ್ನೇ ಅವಲಂಬಿಸಬೇಕು ಎಂದು ಸಂಸ್ಥೆ ಮನವಿ ಮಾಡಿದೆ.








