ತಿರುವನಂತಪುರಂ, ಮೇ 18: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಹಾಗೂ 20 ಮಂದಿ ಸಚಿವರಿಗೆ ಪದವಿ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಬಂದಿದೆ. ಬಳಿಕ ಯುಡಿಎಫ್ ಶಾಸಕಾಂಗ ಪಕ್ಷವು ವಿಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿತು.
ಹೊಸ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ನ 11 ಮಂದಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಐವರು ಹಾಗೂ ಕೇರಳ ಕಾಂಗ್ರೆಸ್-ಜೋಸೆಫ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕೇರಳ ಕಾಂಗ್ರೆಸ್-ಜಾಕೋಬ್ ಮತ್ತು ಇತರ ಮೈತ್ರಿ ಪಕ್ಷಗಳಿಗೆ ತಲಾ ಒಂದು ಸ್ಥಾನ ನೀಡಲಾಗಿದೆ.
ಕಾಂಗ್ರೆಸ್‌ನ ಪ್ರಮುಖ ನಾಯಕರು ಸೇರಿದಂತೆ ಒಟ್ಟು 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಹೊಸ ಸರ್ಕಾರದ ಆಡಳಿತಕ್ಕೆ ಚಾಲನೆ ನೀಡಿದರು.








