ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ನಡೆದ ಭೀಕರ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಸೋಮವಾರ ನಡೆದ ಕಾದಾಟದಲ್ಲಿ ಕಂಜನ್ ಆನೆ, ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಸೇರಿದಂತೆ ಹಲವು ಭಾಗಗಳಿಗೆ ಗಂಭೀರ ಗಾಯ ಮಾಡಿತ್ತು. ಗಾಯಗೊಂಡಿದ್ದ ಆನೆಗೆ ಪಶುವೈದ್ಯರಾದ ಡಾ. ಮುಜೀಬ್ ಮತ್ತು ಚಿಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಾರ್ತಾಂಡ ಮೃತಪಟ್ಟಿದೆ.
ಈ ಕಾದಾಟದ ವೇಳೆ ಮಹಿಳೆಯೊಬ್ಬರು ಆನೆ ತುಳಿತಕ್ಕೆ ಬಲಿಯಾಗಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ.ಇದನ್ನು ಓದಿ –ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ಮೃತ ಮಹಿಳೆಯ ಕುಟುಂಬಸ್ಥರು ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೃತದೇಹವನ್ನು ಚೆನ್ನೈಗೆ ರವಾನಿಸಲಾಗಿದೆ.








