ಕಲಬುರಗಿ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ತೋಲುಸಾಬ್ ಕ್ಯಾಶ್ವಾರ್, ಹುಸೇನ್ ಶಾ, ಮೈಬೂಬ್ ಅಲಿ, ರಸೂಲ್ ಬೀ ಮತ್ತು ಫಾತೀಮಾ ಅಲಿ ಎಂದು ಗುರುತಿಸಲಾಗಿದೆ. ಎಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದರು.
ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.ಇದನ್ನು ಓದಿ –ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








