ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ಇಂದು ಪತ್ತೆಯಾಗಿದೆ.
ಎನ್‌ಡಿಆರ್‌ಎಫ್ ಹಾಗೂ ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ದುರಂತದಲ್ಲಿ 11 ಮಂದಿ ನೀರುಪಾಲಾಗಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ಮೃತರ ಪೈಕಿ ಮಾಸ್ತಮ್ಮ ನಾಯ್ಕ್ ಅವರನ್ನು ರಕ್ಷಿಸಲು ಹೋಗಿದ್ದ ಅವರ ಮಗ ಉಮೇಶ್ ನಾಯ್ಕ್ ಕೂಡ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಯಿಯನ್ನು ಉಳಿಸಲು ಧಾವಿಸಿದ್ದ ಉಮೇಶ್, ಮತ್ತಿಬ್ಬರ ರಕ್ಷಣೆಗೆ ಮುಂದಾದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಇದನ್ನು ಓದಿ –ಮತ್ತೆ ತೈಲ ದರ ಏರಿಕೆ: ವಾಹನ ಸವಾರರಿಗೆ ಶಾಕ್
ದುರಂತದಲ್ಲಿ ಮೃತಪಟ್ಟ ಪ್ರತಿಯೊಂದು ಕುಟುಂಬದ ಕಥೆಯೂ ಮನಕಲಕುವಂತಿದೆ. ಮಾದೇವ್ ನಾಯ್ಕ್ ಮತ್ತು ಲಕ್ಷ್ಮಿ ನಾಯ್ಕ್ ದಂಪತಿ ಸಾವನ್ನಪ್ಪಿದ್ದು, ಅವರ ಮಕ್ಕಳಾದ ದರ್ಶನ ಮತ್ತು ಕೀರ್ತನಾ ಅನಾಥರಾಗಿದ್ದಾರೆ.








