ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ಗುರುವಾರ ಬೆಳಿಗ್ಗೆ 10:30ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಲು ಸಮಯಾವಕಾಶ ನೀಡುವಂತೆ ಸಿಎಂ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನೆಯಾಗಿದೆ.ಇದನ್ನು ಓದಿ –ಬೆಂಗಳೂರಿಗೂ ಎಬೋಲಾ ಆತಂಕ? ಮಹಿಳೆಯಲ್ಲಿ ಸೋಂಕಿನ ಲಕ್ಷಣ
ನಾಳೆ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.








