ಶಿವಮೊಗ್ಗ: ಸಿದ್ದರಾಮಯ್ಯ ಹೊರತುಪಡಿಸಿ ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ರಾಜ್ಯ ಸರ್ಕಾರದ ವೈಫಲ್ಯ ಒಪ್ಪಿಕೊಂಡು ಸಿಎಂ ಬದಲಾವಣೆಗೆ ಮುಂದಾಗಿದೆ ಎಂದು ಟೀಕಿಸಿದರು.
ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಯ ಬಳಿಕ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರವಾಗಿದೆ ಎಂದು ಹೇಳಿದ ವಿಜಯೇಂದ್ರ, ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯಗಳಿಂದ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ನಂತರ ಯಾರು ಮುಖ್ಯಮಂತ್ರಿ ಆದರೂ ಸರ್ಕಾರದಲ್ಲಿ ಗೊಂದಲ ಹೆಚ್ಚಾಗಲಿದೆ. ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಸರ್ಕಾರ ದುರ್ಬಲಗೊಂಡಿದ್ದು, ಮುಂದಿನ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.ಇದನ್ನು ಓದಿ –ರಣವೀರ್ ಸಿಂಗ್ ನಿಷೇಧಕ್ಕೊಳಗಾಗಿಲ್ಲ: FWICE ಸ್ಪಷ್ಟನೆ
ವಾಲ್ಮೀಕಿ, ಮೂಡಾ ಸೇರಿದಂತೆ ಹಲವು ಹಗರಣಗಳಿಂದ ಸರ್ಕಾರದ ಮೇಲಿನ ವಿಶ್ವಾಸ ಕುಸಿದಿದೆ ಎಂದು ಅವರು ವಾಗ್ದಾಳಿ ನಡೆಸಿದರು.








