ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ಚರ್ಚೆಗಳ ನಡುವೆಯೇ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷದ ಸಾಧನೆಯನ್ನು ಮೆಲುಕು ಹಾಕಿದ್ದಾರೆ.
ರಾಜ್ಯದ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿರುವ ಸಂದರ್ಭದಲ್ಲಿ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ನೀಡಿದ ಪ್ರತಿಯೊಂದು ಭರವಸೆಯನ್ನೂ ಈಡೇರಿಸಿದ್ದೇವೆ. ನುಡಿದಂತೆ ನಡೆದ ಹೆಮ್ಮೆ ನಮಗಿದೆ ಎಂದು ತಿಳಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಮನೆ ಮನೆಗೂ ತಲುಪಿಸಲಾಗಿದೆ ಎಂದ ಅವರು, ಅನ್ನಭಾಗ್ಯ ಯೋಜನೆಯಡಿ ಇದುವರೆಗೆ ₹18,897 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಸಿದ್ದು ಬಿಟ್ಟು ಯಾರೇ ಸಿಎಂ ಆದರೂ ತಾತ್ಕಾಲಿಕ: ವಿಜಯೇಂದ್ರ
ಈ ಯೋಜನೆಯಿಂದ 4.26 ಕೋಟಿ ಪಡಿತರದಾರರಿಗೆ ಉಚಿತ ಆಹಾರಧಾನ್ಯ ಸಿಗುತ್ತಿದ್ದು, ಯಾರೂ ಹಸಿವಿನಿಂದ ಮಲಗಬಾರದು ಎಂಬ ಸರ್ಕಾರದ ಸಂಕಲ್ಪ ಸಾಕಾರವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.








