ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತು ದೂರುಗಳು ಹೆಚ್ಚಾಗುತ್ತಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ವ್ಯಾಪಕ ದಾಳಿ ನಡೆಸಿದ್ದಾರೆ. ಮರಳು ಕ್ವಾರಿಗಳು ಹಾಗೂ ಸಂಗ್ರಹ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿನ ಮರಳು ಮತ್ತು ಕಲ್ಲು ಕ್ವಾರಿಗಳ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದರು. ನಿಂಬೆಗೊಂದಿ, ಮಂಗೋಟೆ, ಸನ್ಯಾಸಿಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹರಿದ್ರಾವತಿ, ಸಂಪಕಟ್ಟೆ ಹಾಗೂ ಆವಿನಹಳ್ಳಿ ಭಾಗಗಳಲ್ಲೂ ಪರಿಶೀಲನೆ ಕೈಗೊಳ್ಳಲಾಗಿದೆ.
ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಓದಿ –ಜೂನ್ 3ರಂದು ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ದಾಳಿಯಲ್ಲಿ ಶಿವಮೊಗ್ಗ ಹಾಗೂ ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಭಾಗವಹಿಸಿದ್ದು, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.








