ಬೆಂಗಳೂರು: ರಾಜ್ಯಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಆನೇಕಲ್, ಅತ್ತಿಬೆಲೆ, ಸರ್ಜಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಸಂಜೆ ವೇಳೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ.
ಇಂದೂ ಆನೇಕಲ್ ಭಾಗದಲ್ಲಿ ಮಳೆ ಮುಂದುವರಿದಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು.
ಬೆಂಗಳೂರಿನಲ್ಲಿ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಳಗ್ಗೆ ಬಿಸಿಲಿನ ವಾತಾವರಣ ಕಂಡುಬಂದಿದ್ದರೂ, ಮಧ್ಯಾಹ್ನದ ವೇಳೆಗೆ ಮೋಡ ಕವಿದು ಮಳೆಯ ವಾತಾವರಣ ನಿರ್ಮಾಣವಾಯಿತು.ಇದನ್ನು ಓದಿ –UG-CET ಫಲಿತಾಂಶ ಪ್ರಕಟ; 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭ್ಯ
ನಗರದ ಹಲವೆಡೆ ಸೋನೆ ಮಳೆಯಾಗಿದ್ದು, ತಂಪಾದ ವಾತಾವರಣ ಆವರಿಸಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲೂ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








