ಮಂಡ್ಯ: ಜಿಲ್ಲೆಯ ನೆಹರುನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಇದೇ ವೇಳೆ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಂದೇ ಕುಟುಂಬದ ಮೂವರು ಅಲ್ಪಾವಧಿಯಲ್ಲಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ.ಇದನ್ನು ಓದಿ –H-1B ಫಾಸ್ಟ್-ಟ್ರ್ಯಾಕ್ ಶುಲ್ಕ ಅಮಾನ್ಯ
ಘಟನಾ ಸ್ಥಳಕ್ಕೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








