By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: 126 ವರ್ಷಗಳಲ್ಲೇ ಜೂನ್‌ನಲ್ಲಿ ಮೂರನೇ ಕನಿಷ್ಠ ಮಳೆ ದಾಖಲೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > 126 ವರ್ಷಗಳಲ್ಲೇ ಜೂನ್‌ನಲ್ಲಿ ಮೂರನೇ ಕನಿಷ್ಠ ಮಳೆ ದಾಖಲೆ
New Delhi

126 ವರ್ಷಗಳಲ್ಲೇ ಜೂನ್‌ನಲ್ಲಿ ಮೂರನೇ ಕನಿಷ್ಠ ಮಳೆ ದಾಖಲೆ

Team Varthaman
Last updated: June 30, 2026 10:24 AM
Team Varthaman
Published: June 30, 2026
Share
SHARE

ನವದೆಹಲಿ: ದೇಶದಲ್ಲಿ ಈ ಬಾರಿಯ ಜೂನ್ ತಿಂಗಳ ಮುಂಗಾರು ಮಳೆ ಕಳೆದ 126 ವರ್ಷಗಳಲ್ಲೇ ಮೂರನೇ ಅತ್ಯಂತ ಕಡಿಮೆ ಮಟ್ಟಕ್ಕೆ ದಾಖಲಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, ಸೋಮವಾರದವರೆಗೆ ದೇಶದಲ್ಲಿ ಕೇವಲ 92.1 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾಮಾನ್ಯ ಮಳೆ ಪ್ರಮಾಣಕ್ಕಿಂತ ಶೇ.42ರಷ್ಟು ಕಡಿಮೆಯಾಗಿದೆ.

1901ರಿಂದ ಇದುವರೆಗೆ ಜೂನ್ ತಿಂಗಳಲ್ಲಿ 100 ಮಿಲಿಮೀಟರ್‌ಗಿಂತ ಕಡಿಮೆ ಮಳೆಯಾಗಿರುವುದು ಕೇವಲ ನಾಲ್ಕು ಬಾರಿ ಮಾತ್ರ. 2009ರಲ್ಲಿ 87.5 ಮಿಲಿಮೀಟರ್ ಮಳೆಯಾಗಿ ಅತ್ಯಂತ ಕಡಿಮೆ ಮಳೆ ದಾಖಲಾಗಿದ್ದರೆ, 1905ರಲ್ಲಿ 92.3 ಮಿಲಿಮೀಟರ್ ಹಾಗೂ 2014ರಲ್ಲಿ 93 ಮಿಲಿಮೀಟರ್ ಮಳೆಯಾಗಿತ್ತು. ಈ ಬಾರಿ ಜೂನ್ ತಿಂಗಳು ಕೂಡ ಇದೇ ಪಟ್ಟಿಗೆ ಸೇರುವ ಸಾಧ್ಯತೆ ಇದೆ.

Join WhatsApp Group

ಐಎಂಡಿ ಮಾಹಿತಿ ಪ್ರಕಾರ, 1926ರಲ್ಲಿ 97.4 ಮಿಲಿಮೀಟರ್, 1902ರಲ್ಲಿ 109 ಮಿಲಿಮೀಟರ್, 1912ರಲ್ಲಿ 106.8 ಮಿಲಿಮೀಟರ್ ಹಾಗೂ 1923ರಲ್ಲಿ 101.7 ಮಿಲಿಮೀಟರ್ ಮಳೆಯಾಗಿತ್ತು. ಸಾಮಾನ್ಯವಾಗಿ ಜೂನ್ ತಿಂಗಳ ದೀರ್ಘಾವಧಿಯ ಸರಾಸರಿ ಮಳೆ ಪ್ರಮಾಣ 165 ಮಿಲಿಮೀಟರ್‌ಗಿಂತ ಹೆಚ್ಚಿರುತ್ತದೆ.

ಈ ವರ್ಷ ನೈರುತ್ಯ ಮುಂಗಾರು ತಡವಾಗಿ ಆರಂಭವಾಗಿದ್ದು, ಮಧ್ಯದಲ್ಲಿ 11 ದಿನಗಳ ಕಾಲ ಸ್ಥಗಿತಗೊಂಡಿತ್ತು. ಇದರ ಪರಿಣಾಮವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ಉತ್ತರ, ಮಧ್ಯ ಹಾಗೂ ಪಶ್ಚಿಮ ಭಾರತದ ಹಲವು ಭಾಗಗಳಿಗೆ ಮುಂಗಾರು ತಡವಾಗಿ ತಲುಪಿದೆ.

ಮುಂಗಾರು ಪ್ರವೇಶಿಸಿದ ರಾಜ್ಯಗಳಲ್ಲೂ ಮಹಾರಾಷ್ಟ್ರ, ಒಡಿಶಾ, ಬಿಹಾರ, ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಮಳೆಯ ಕೊರತೆ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಗೆ ಜೂನ್ 27ರಂದು ಮುಂಗಾರು ಪ್ರವೇಶಿಸಬೇಕಾಗಿದ್ದರೂ ಅದು ಇನ್ನೂ ತಲುಪಿಲ್ಲ. ಜುಲೈ ಮೊದಲ ವಾರದಲ್ಲಿ ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಬಲ ಎಲ್ ನಿನೊ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ಐಎಂಡಿ ಈಗಾಗಲೇ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಮುಂಗಾರು ಮಳೆಯ ದೀರ್ಘಾವಧಿಯ ಮುನ್ಸೂಚನೆಯನ್ನು ಶೇ.90ಕ್ಕೆ ಇಳಿಸಿದೆ. ಇದರಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಆದರೆ, ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈಗಲೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮಳೆಯ ಹಂಚಿಕೆ ಹಾಗೂ ಮುಂದಿನ ತಿಂಗಳ ಮಳೆ ಪರಿಸ್ಥಿತಿಯನ್ನೂ ಪರಿಗಣಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಐಎಂಡಿಯ ಮಾಜಿ ಮಹಾನಿರ್ದೇಶಕ ಕೆ.ಜೆ. ರಮೇಶ್ ಅವರ ಪ್ರಕಾರ, ಮುಂಗಾರು ಪ್ರವೇಶಿಸಿರುವ ರಾಜ್ಯಗಳಲ್ಲಿ ಇದುವರೆಗೆ ಉತ್ತಮ ಮಳೆಯಾಗಿದೆ. ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ಅಂತರ್ಜಲ ಮತ್ತು ಜಲಾಶಯಗಳಲ್ಲೂ ನೀರಿನ ಲಭ್ಯತೆ ಸಮರ್ಪಕವಾಗಿದೆ.

ಕೇಂದ್ರ ಕೃಷಿ ಸಚಿವಾಲಯವು ಈ ಬಾರಿ ದುರ್ಬಲ ಮುಂಗಾರಿನಿಂದ ಬಾಧಿತವಾಗುವ ಸಾಧ್ಯತೆ ಇರುವ 315 ಸೂಕ್ಷ್ಮ ಜಿಲ್ಲೆಗಳನ್ನು ಗುರುತಿಸಿದೆ. ಅವುಗಳಲ್ಲಿ 111 ಜಿಲ್ಲೆಗಳನ್ನು ಹೆಚ್ಚಿನ ಆದ್ಯತೆಯ ವಿಭಾಗಕ್ಕೆ ಸೇರಿಸಲಾಗಿದ್ದು, ಉಳಿದ 76 ಜಿಲ್ಲೆಗಳು ಮಧ್ಯಮ ಆದ್ಯತೆಯ ಪಟ್ಟಿಯಲ್ಲಿವೆ. ಈ ಜಿಲ್ಲೆಗಳು ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕ, ಬಿಹಾರ, ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿದಂತೆ 12 ರಾಜ್ಯಗಳಲ್ಲಿ ವ್ಯಾಪಿಸಿವೆ.

ಇದೀಗ ದೆಹಲಿ ಹಾಗೂ ಹರಿಯಾಣದ ಕೆಲವೆಡೆ ಭಾನುವಾರ ಮತ್ತು ಸೋಮವಾರ ಗುಡುಗು ಸಹಿತ ಮಳೆಯಾಗಿದ್ದರೂ, ಮಂಗಳವಾರ ಮಳೆ ಮುಂದುವರಿಯುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • 126 ವರ್ಷಗಳಲ್ಲೇ ಜೂನ್‌ನಲ್ಲಿ ಮೂರನೇ ಕನಿಷ್ಠ ಮಳೆ ದಾಖಲೆ
    by Team Varthaman
  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು
ಏ.1ರಿಂದ ನೀರಿನ ದರ ಏರಿಕೆ
ಮಾರ್ಚ್‌ನಲ್ಲಿ ರಾಜ್ಯ ಬಜೆಟ್ ಮಂಡನೆ: ಸತೀಶ್ ಜಾರಕಿಹೊಳಿ
ಕಾಲ್ತುಳಿತ ದುರಂತ: ಆರ್‌ಸಿಬಿ ಆಯೋಜಕರ ಬಂಧನೆ, ತನಿಖೆ ಚುರುಕು
ಬೊಂಡಿ ಬೀಚ್‌ನಲ್ಲಿ ಉಗ್ರರ ಗುಂಡಿನ ದಾಳಿ: 16 ಮಂದಿ ಬಲಿ
TAGGED:breakingnewslatestnewsRainWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ಭ್ರಷ್ಟಾಚಾರ ಆರೋಪ; ಸಚಿವ ಮಹದೇವಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು

Team Varthaman
Team Varthaman
October 28, 2025
ಗ್ರಾಹಕರಿಗೆ ವಂಚನೆ: 2,334 ಕಂಪನಿಗಳ ವಿರುದ್ಧ ಪ್ರಕರಣಗಳು ದಾಖಲು
ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ
ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಕಿಕ್ ಔಟ್
ರಾಜ್ಯದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?