By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
BengaluruKarnatakaMain News

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Team Varthaman
Last updated: July 2, 2026 4:46 PM
Team Varthaman
Published: July 2, 2026
Share
SHARE

ಬೆಂಗಳೂರು: ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿದ್ದು, ಬುಧವಾರ ಐದು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಅಗತ್ಯ ಹಾಗೂ ಅಧಿಕಾರಿಗಳ ಮನವಿಯನ್ನು ಪರಿಗಣಿಸಿ ಈ ವರ್ಗಾವಣೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಧಿಸೂಚನೆ ಪ್ರಕಟಿಸಿದೆ.

Join WhatsApp Group

ಈ ವರ್ಗಾವಣೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ನೂತನವಾಗಿ ಸ್ಥಾಪಿಸಲಾದ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜೊತೆಗೆ ಅವರು ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಮುಂದುವರಿಸಲಿದ್ದಾರೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಈವರೆಗೆ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆಯಾಗಿದ್ದ ಎನ್. ಮಂಜುಶ್ರೀ ಅವರಿಗೆ ಸದ್ಯ ಯಾವುದೇ ಹೊಸ ಹುದ್ದೆ ನೀಡಲಾಗಿಲ್ಲ.

ಪ್ರಜಾಸೇವಾ ಇಲಾಖೆ ಏನು?

ಸಾರ್ವಜನಿಕರ ಅಹವಾಲುಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡುವುದು ಹಾಗೂ ಆಡಳಿತಾತ್ಮಕ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಸ್ಥಾಪಿಸಿದೆ. ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಧಾರದಂತೆ, ಜೂನ್ 24ರಂದು ಡಿಪಿಎಆರ್‌ ಈ ಇಲಾಖೆಯ ರಚನೆಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು.

ಹೊಸ ಇಲಾಖೆಯಲ್ಲಿ ಆಡಳಿತ ಸುಧಾರಣೆ, ಸಾರ್ವಜನಿಕ ಕುಂದುಕೊರತೆ ವಿಭಾಗ ಹಾಗೂ ಸಕಾಲ ಮಿಷನ್ ಅನ್ನು ವಿಲೀನಗೊಳಿಸಲಾಗಿದ್ದು, ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನೀಡುವ ಉದ್ದೇಶ ಹೊಂದಿದೆ.

73 ಖಾಯಂ ಹುದ್ದೆಗಳ ಮರುಹೊಂದಾಣಿಕೆ

ಪ್ರಜಾಸೇವಾ ಇಲಾಖೆಯಲ್ಲಿ ಒಟ್ಟು 73 ಖಾಯಂ ಹುದ್ದೆಗಳನ್ನು ಮರುಹೊಂದಾಣಿಕೆ ಮೂಲಕ ಸೃಷ್ಟಿಸಲಾಗಿದೆ. ಸರ್ಕಾರದ ಕಾರ್ಯದರ್ಶಿ, ಮಿಷನ್ ನಿರ್ದೇಶಕ, ಅಪರ ಮಿಷನ್ ನಿರ್ದೇಶಕ, ಉಪ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳು ಇದರಲ್ಲಿ ಸೇರಿವೆ. ಜೊತೆಗೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗಾಗಿ 48 ಹುದ್ದೆಗಳನ್ನು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸರ್ಕಾರ ಅನುಮೋದನೆ ನೀಡಿದೆ.ಇದನ್ನು ಓದಿ –ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ: 7 ಕಾರ್ಮಿಕರ ದುರ್ಮರಣ

ಈ ಹೊಸ ಇಲಾಖೆಯ ಆಡಳಿತ ಜವಾಬ್ದಾರಿಯನ್ನು ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರಿಗೆ ವಹಿಸಲಾಗಿದೆ.

  • ಕೋಪವೆಂಬುದನರ್ಥ
    by Team Varthaman
  • ಲಂಚ ಪಡೆಯುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ
    by Team Varthaman
  • ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
    by Team Varthaman
  • ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ: 7 ಕಾರ್ಮಿಕರ ದುರ್ಮರಣ
    by Team Varthaman
  • ಸಾರಿಗೆ ನೌಕರರಿಗೆ 12.5% ವೇತನ ಹೆಚ್ಚಳ
    by Team Varthaman
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
ಮದ್ದೂರು : ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಂದ್
ಏಪ್ರಿಲ್ 1ರಿಂದ ಟೋಲ್‌ನಲ್ಲಿ ನಗದು ರದ್ದು?
ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ
ಜೂನ್ 11 ರಂದು ಕರ್ನಾಟಕ ಬಂದ್?
TAGGED:breakingnewsHarsha GuptaIAS Transferlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest News

ಭಾರತದ ಆಮದುಗಳ ಮೇಲೆ 24 ಗಂಟೆಗಳಲ್ಲಿ ಭಾರೀ ಸುಂಕ ಹೆಚ್ಚಳ: ಟ್ರಂಪ್

Team Varthaman
Team Varthaman
August 6, 2025
ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
ಮೇ 1ರಿಂದ ಎಟಿಎಂ ವಹಿವಾಟು ಶುಲ್ಕ ಹೆಚ್ಚಳ
ಅನ್ಯ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಮೀಸಲಾತಿ ಇಲ್ಲ: ಸುಪ್ರೀಂ ತೀರ್ಪು
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?