- 20 ಮಂದಿ ಸಚಿವರಾಗಿ ಸೇರ್ಪಡೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ 4.05 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಲೋಕಭವನ ಅಧಿಕೃತವಾಗಿ ತಿಳಿಸಿದೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಸಮಾರಂಭಕ್ಕೆ ಆಗಮಿಸುವ ಗಣ್ಯರು ಹಾಗೂ ಅತಿಥಿಗಳ ಅನುಕೂಲಕ್ಕಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಲೋಕೋಪಯೋಗಿ ಇಲಾಖೆ ಮೂರು ದಿನಗಳ ಹಿಂದೆಯೇ ಎಲ್ಲ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ.
Contents
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವವರು
- ಪಿ. ಎಂ. ನರೇಂದ್ರಸ್ವಾಮಿ
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ. ಎಸ್. ಬಸವಂತಪ್ಪ
- ಬಿ. ನಾಗೇಂದ್ರ
- ಟಿ. ರಘುಮೂರ್ತಿ
- ಬಿ. ಜೆಡ್. ಜಮೀರ್ ಅಹ್ಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಪುಟ್ಟರಂಗಶೆಟ್ಟಿ
- ಮಂಕಾಳ ವೈದ್ಯ
- ಡಾ. ಅಜಯ್ ಸಿಂಗ್
- ಎನ್. ಚಲುವರಾಯಸ್ವಾಮಿ
- ಕೆ. ಎಂ. ಶಿವಲಿಂಗೇಗೌಡ
- ಎಚ್. ಸಿ. ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ
- ಲಕ್ಷ್ಮಣ ಸವದಿ
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾದ ಈ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಬಳಿಕ ಅವರಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ. ಸಮಾರಂಭದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯಪಾಲರು ಸೇರಿದಂತೆ ಸಚಿವರು, ಶಾಸಕರು ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.








