By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
BengaluruKarnataka

ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು

Team Varthaman
Last updated: August 13, 2026 10:57 AM
Team Varthaman
Published: August 13, 2026
Share
SHARE

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದೆ.

ಮೊದಲ ಅಧಿವೇಶನದಲ್ಲೇ ಹಲವು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ತಂತ್ರ ರೂಪಿಸಿವೆ.

Contents
  • ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದೆ.
  • ಕಾನೂನು ಸುವ್ಯವಸ್ಥೆ ವಿಚಾರವೂ ಪ್ರತಿಧ್ವನಿಸುವ ಸಾಧ್ಯತೆ
  • ಅನುದಾನ ತಾರತಮ್ಯದ ಆರೋಪ
Join WhatsApp Group

ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ ಪ್ರಕರಣವನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಕುರಿತು ಸದನದಲ್ಲಿ ಸರ್ಕಾರದಿಂದ ಸ್ಪಷ್ಟ ಉತ್ತರ ಪಡೆಯಲು ವಿಪಕ್ಷಗಳು ಸಿದ್ಧತೆ ನಡೆಸಿವೆ.

ಇದೇ ವೇಳೆ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟದ ವಿಚಾರವೂ ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ರೈತರ ಸಮಸ್ಯೆಗಳು, ಮಳೆ ಕೊರತೆ, ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಸೇರಿದಂತೆ ಕೃಷಿ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಮುಂದಾಗಿವೆ. ಬೆಳೆಹಾನಿಗೆ ಸಮರ್ಪಕ ಪರಿಹಾರ ನೀಡಿಲ್ಲ ಎಂಬ ಆರೋಪವನ್ನೂ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಕಾನೂನು ಸುವ್ಯವಸ್ಥೆ ವಿಚಾರವೂ ಪ್ರತಿಧ್ವನಿಸುವ ಸಾಧ್ಯತೆ

ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರದಲ್ಲೂ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿ-ಜೆಡಿಎಸ್ ಸಿದ್ಧವಾಗಿವೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ವಿಪಕ್ಷಗಳು ವಾಗ್ದಾಳಿ ನಡೆಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ನಡೆದಿರುವ ಅಪರಾಧ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸರ್ಕಾರದಿಂದ ಉತ್ತರ ಪಡೆಯಲು ಮುಂದಾಗಲಿವೆ.

ಪಶುವೈದ್ಯರ ನೇಮಕಾತಿಯಲ್ಲಿ ಕೆಪಿಎಸ್‌ಸಿ ಅಕ್ರಮ ನಡೆದಿದೆ ಎಂಬ ಆರೋಪವೂ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. ಇದರ ಜತೆಗೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಫಲಾನುಭವಿಗಳಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬ ಬಗ್ಗೆಯೂ ಸರ್ಕಾರವನ್ನು ಪ್ರಶ್ನಿಸಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.

ಅನುದಾನ ತಾರತಮ್ಯದ ಆರೋಪ

ಬಿಜೆಪಿ-ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನೂ ಸದನದಲ್ಲಿ ಪ್ರಸ್ತಾಪಿಸಲು ಮೈತ್ರಿಕೂಟದ ಶಾಸಕರು ಮುಂದಾಗಿದ್ದಾರೆ. ಕ್ಷೇತ್ರವಾರು ಅನುದಾನದ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಿಳಂಬದ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.ಇದನ್ನು ಓದಿ –ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ

ಒಟ್ಟಾರೆ, ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ ಪ್ರಕರಣದಿಂದ ಹಿಡಿದು ರೈತರ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ, ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪ, ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಅನುದಾನ ತಾರತಮ್ಯದವರೆಗೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿದೆ.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
ಬೆಂಗಳೂರಿನ ಫೋಥಿಸ್ ಬಟ್ಟೆ ಶೋ ರೂಮ್ ಮೇಲೆ IT ದಾಳಿ
ನ.19ರಂದು ‘ಅಕ್ಕ’ ಪಡೆಗೆ ಚಾಲನೆ — ಲಕ್ಷ್ಮಿ ಹೆಬ್ಬಾಳ್ಕರ್‌
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ
ಬಣ್ಣದ ಬದುಕಿಗೂ ಇಹುದು ಕಷ್ಟ ಸುಖ(ಬ್ಯಾಂಕರ್ಸ್ ಡೈರಿ)
TAGGED:latestnewsMonsoon sessionಮುಂಗಾರು ಅಧಿವೇಶನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ

Team Varthaman
Team Varthaman
March 20, 2026
ಟೆಂಡರ್ ಉಲ್ಲಂಘನೆ: ಇಬ್ಬರು ಅಧಿಕಾರಿಗಳು ಅಮಾನತು
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ
ಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಅನುಮಾನಾಸ್ಪದ ಸಾವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?