ಬೆಂಗಳೂರು: ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಈ ಸುದ್ದಿ ಕನ್ನಡ ಕಿರುತೆರೆ ಮತ್ತು ಚಿತ್ರರಂಗಕ್ಕೆ ಆಘಾತ ತಂದಿದೆ.
ಹಿಟ್ಲರ್ ಕಲ್ಯಾಣ ಧಾರಾವಾಹಿಯ ಮೂಲಕ ದಿಲೀಪ್ ರಾಜ್ ಮತ್ತೆ ಕಿರುತೆರೆಗೆ ಮರಳಿದ್ದು, ಅವರ ಪಾತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿತ್ತು. ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಅವರು ಗುರುತಿಸಿಕೊಂಡಿದ್ದರು.
2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಮಿಲನ ಸಿನಿಮಾದಲ್ಲಿನ ಖಳನಾಯಕ ಪಾತ್ರದಿಂದ ಹೆಚ್ಚಿನ ಜನಪ್ರಿಯತೆ ಪಡೆದಿದ್ದರು. ಬಳಿಕ ಸುಗ್ರೀವ, ಗೆಳೆಯ, ಯೂಟರ್ನ್ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.
ಇತ್ತೀಚೆಗೆ ಅವರು ಕೃಷ್ಣ ರುಕ್ಕು ಧಾರಾವಾಹಿಯನ್ನು ನಿರ್ಮಿಸುತ್ತಿದ್ದರು. ಲವ್ ಮಾಕ್ಟೇಲ್ 3 ಅವರ ಕೊನೆಯ ಚಿತ್ರವಾಗಿತ್ತು. ಮನೆಯೊಂದು ಮೂರು ಬಾಗಿಲು, ರಥಸಪ್ತಮಿ ಮತ್ತು ಪ್ರೀತಿಗಾಗಿ ಧಾರಾವಾಹಿಗಳಲ್ಲೂ ಅವರು ನಟಿಸಿದ್ದರು.
ಹೃದಯಾಘಾತವಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಅವರ ಪಾರ್ಥಿವ ಶರೀರವನ್ನು ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
ದಿಲೀಪ್ ರಾಜ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.








