ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ , ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಹಾಗೂ ಹೋಟೆಲ್ ಸಂಘದೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 10,000 ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.
ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್ ಹಾಗೂ ಪಿಜಿ ಸೇರಿದಂತೆ ವಿವಿಧ ವಲಯಗಳಿಗೆ ಈ ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ. ಮುಂದಿನ ಸೋಮವಾರ ಹೋಟೆಲ್ ಮಾಲೀಕರೊಂದಿಗೆ ಮತ್ತೊಂದು ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಅಕ್ರಮ ತಡೆಯಲು ಕಮರ್ಷಿಯಲ್ ಗ್ಯಾಸ್ ಬಳಕೆದಾರರಿಗೆ ನೋಂದಣಿ ಕಡ್ಡಾಯ ಮಾಡಲಾಗಿದೆ. ಗೇಲ್ ಕಂಪನಿಯೊಂದಿಗೆ ಒಂದು ವಾರದೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡದವರಿಗೆ ಗ್ಯಾಸ್ ಪೂರೈಕೆ ಸಿಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಈ ಕ್ರಮದಿಂದ ಯಾರು ಎಷ್ಟು ಗ್ಯಾಸ್ ಬಳಕೆ ಮಾಡುತ್ತಿದ್ದಾರೆ ಎಂಬುದನ್ನು ನಿಗಾ ವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
ಹೋಟೆಲ್ ಮಾಲೀಕರು ವಿದ್ಯುತ್ ಬಿಲ್ ಕಡಿತಕ್ಕೆ ಮನವಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.








