ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆತ್ಮಹತ್ಯೆಗೆ ಮುನ್ನ ಮಲ್ಲಿಕಾರ್ಜುನ ವಿಡಿಯೋ ಮಾಡಿ, ಜಂಟಿ ನಿರ್ದೇಶಕ ಕೃಷ್ಣಪ್ಪ ತಮ್ಮ ಮೇಲೆ ಕಿರುಕುಳ ನೀಡುತ್ತಿದ್ದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಆರೋಪಿಸಿದ್ದಾರೆ. ತಮ್ಮ ಕುಟುಂಬದ ಬಗ್ಗೆ ಪ್ರೀತಿಯಿಂದ ಉಲ್ಲೇಖಿಸಿದ ಅವರು, ಮೇಲಾಧಿಕಾರಿಯ ವರ್ತನೆ ತಾಳಲಾರದೆ ಈ ಹೆಜ್ಜೆ ಇಟ್ಟಿರುವುದಾಗಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಅವರು ಡೆತ್ ನೋಟ್ ಕೂಡ ಬರೆದಿರುವುದು ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ವಿರುದ್ಧ ಆರೋಪಗಳ ಜೊತೆಗೆ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದನ್ನು ಓದಿ –ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ.








