By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ದಸರಾ ಸಂಭ್ರಮದ ಜೊತೆಗೆ ಸುರಕ್ಷತೆಗೂ ನಿಗಾವಹಿಸಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ದಸರಾ ಸಂಭ್ರಮದ ಜೊತೆಗೆ ಸುರಕ್ಷತೆಗೂ ನಿಗಾವಹಿಸಿ
Dasara 2025KarnatakaMysore

ದಸರಾ ಸಂಭ್ರಮದ ಜೊತೆಗೆ ಸುರಕ್ಷತೆಗೂ ನಿಗಾವಹಿಸಿ

Team Varthaman
Last updated: September 11, 2025 6:22 PM
Team Varthaman
Published: September 11, 2025
Share
SHARE

ಮೈಸೂರು,ಸೆ.11- ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸುವ ವಿದ್ಯುತ್‌ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ.

Join WhatsApp Group

ವಿದ್ಯುತ್‌ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸೆಸ್ಕ್‌ ವತಿಯಿಂದಲೂ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ದಸರಾ ದೀಪಾಲಂಕಾರ ಮಾಡಲಾಗಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದಸರಾ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ ಆನಂದಿಸುವಂತೆ ಸೆಸ್ಕ್‌ ಪ್ರಕಟಣೆಯಲ್ಲಿ ಕೋರಿದೆ.

ಸಲಹೆಗಳಿವು: ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಿ. ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸಿ. ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಿ. ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಲು ಕೋರಲಾಗಿದೆ. ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸಿ.ಇದನ್ನು ಓದಿ –  ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆ ಸಂಚರಣೆ

ಗ್ರಾಹಕರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್‌ ಪ್ರಥಮ ಆದ್ಯತೆ ನೀಡುತ್ತದೆ. ಸಾರ್ವಜನಿಕರು ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವಾಗ ಸುರಕ್ಷತೆಗೂ ನಿಗಾವಹಿಸಬೇಕು. ಆದ್ದರಿಂದ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಬೇಕಿದೆ. ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman


ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಶವವಾಗಿ ಪತ್ತೆ
ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
ಕುಲಶಾಸ್ತ್ರೀಯ ಅಧ್ಯಯನ ಜಾರಿಗೆ ಕ್ರಮ: ಸಚಿವ ಎಚ್.‌ಸಿ.ಮಹದೇವಪ್ಪ
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
ವಿವಿಧ ಇಲಾಖೆ ನೇಮಕಾತಿ ಪರೀಕ್ಷೆ: ಅಂತಿಮ ಪಟ್ಟಿ ಪ್ರಕಟ
TAGGED:dasara lightingslatestnewsMysore Newsmysuru dasara 2025ದಸರಾ ದೀಪಾಲಂಕಾರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

Team Varthaman
Team Varthaman
November 12, 2025
ಐಟಿ, ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆಗೆ ಕ್ರಮ: ಪ್ರಿಯಾಂಕ್ ಖರ್ಗೆ
ಜಗತ್ತಿನಲ್ಲಿರುವ ಎಲ್ಲಾ ವೃತ್ತಿಗಳನ್ನು ಸೃಷ್ಟಿಸುವ ವೃತ್ತಿ ಶಿಕ್ಷಕ
IPL 2026: ಮಾರ್ಚ್ 28ರಿಂದ ಆರಂಭ
ಕರುಳಿನ ಉತ್ತಮ ಆರೋಗ್ಯಕ್ಕೆ ಪ್ರೊಬಯೋಟಿಕ್ಸ್ ಆಹಾರಗಳು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?