ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಖಂಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ರಾಜಿ ಅರ್ಜಿ ಸಲ್ಲಿಸುವ ಸಂಬಂಧ ದೂರುದಾರ ರಾಹುಲ್ ಹೈದರಾಬಾದ್ ಅವರಿಂದ ₹10,000 ನಗದು ಸೇರಿದಂತೆ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ಗಳು, ಒಂದು ಜೋಡಿ ಶೂ, 4 ಮಹಿಳೆಯರ ಉಡುಪುಗಳು ಹಾಗೂ 6 ಜೋಡಿ ಮಹಿಳೆಯರ ಚಪ್ಪಲಿಗಳನ್ನು ನೀಡುವಂತೆ ಎಪಿಪಿ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.
ದೂರುದಾರರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಪೂರ್ವಯೋಜಿತ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದರು.ಇದನ್ನು ಓದಿ –ಜಿಬಿಎ ಚುನಾವಣೆ: ಡಿಸೆಂಬರ್ ಒಳಗೆ ನಡೆಸಲು ಸೂಚನೆ
ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಬಂಧಿತ ಎಪಿಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.







