- ಬಲೂನ್‌ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಅವಘಡ
ಮೈಸೂರು: ಮೈಸೂರು ಅರಮನೆ ಮುಂಭಾಗ ಬಲೂನ್‌ಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುವ ವೇಳೆ ಅಚಾನಕ್ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಪೋಟದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಸಮೀಪದ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವನ್ನಪ್ಪಿದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ಮಾಹಿತಿ ತಿಳಿದ ತಕ್ಷಣ ಕೃಷ್ಣರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಬಳಕೆ ವೇಳೆ ಸುರಕ್ಷತಾ ಕ್ರಮಗಳಲ್ಲಿ ಲೋಪವಿದೆಯೇ ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗಿದೆ. ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.








