ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.
ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನನ್ನು ಅನುಮಾನಾಸ್ಪದ ವರ್ತನೆಯ ಹಿನ್ನೆಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.








