ಬೆಂಗಳೂರು: ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಐವರು ಸಜೀವ ದಹನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಟ್ಟಡ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತನ ಸಹೋದರ ಗೋಪಾಲ್ ಸಿಂಗ್ ನೀಡಿದ ದೂರಿನ ಮೇರೆಗೆ, ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಕಲ್ಪಿಸದ ಕಾರಣಕ್ಕೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಇದನ್ನು ಓದಿ –ಮುಂಗಾರು ಆರ್ಭಟ :ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ
ಕಟ್ಟಡದಲ್ಲಿ ಅಗ್ನಿ ತಡೆಗಟ್ಟುವ ಸಾಮಾನ್ಯ ಸುರಕ್ಷತಾ ವ್ಯವಸ್ಥೆಯೂ ಇರದ ಕಾರಣ, ನಿರ್ಲಕ್ಷ್ಯದಿಂದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಆಧಾರದ ಮೇಲೆ ಇಬ್ಬರು ಕಟ್ಟಡ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಿದ್ದಾರೆ.