By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಬಿಹಾರ ವಿಧಾನಸಭಾ ಚುನಾವಣೆ: ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Politics > ಬಿಹಾರ ವಿಧಾನಸಭಾ ಚುನಾವಣೆ: ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ
Politics

ಬಿಹಾರ ವಿಧಾನಸಭಾ ಚುನಾವಣೆ: ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ

Team Varthaman
Last updated: October 23, 2025 5:25 PM
Team Varthaman
Published: October 23, 2025
Share
SHARE

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ ಬಣವು ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದೆ.


ಗುರುವಾರ ಪಟ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹಲೋತ್ ಅವರು ಮಾತನಾಡಿ, “ಈ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪೂರ್ಣ ಬೆಂಬಲ ನೀಡಿದ್ದಾರೆ,” ಎಂದು ತಿಳಿಸಿದ್ದಾರೆ.

Join WhatsApp Group

ಅದೇ ವೇಳೆ, ‘ಇಂಡಿಯಾ’ ಬಣವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷ (ವಿಐಪಿ) ನಾಯಕ ಮುಖೇಶ್ ಸಾಹ್ನಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುವುದು ಎಂದು ಘೋಷಿಸಲಾಯಿತು. ಹಿಂದುಳಿದ ವರ್ಗದ ಮತ್ತೊಬ್ಬ ನಾಯಕರಿಗೂ ಉಪಮುಖ್ಯಮಂತ್ರಿ ಸ್ಥಾನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.

ಚುನಾವಣಾ ವೇಳಾಪಟ್ಟಿಯ ಪ್ರಕಾರ, ಬಿಹಾರದಲ್ಲಿ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ.

ಈ ಘೋಷಣೆಯೊಂದಿಗೆ ಬಿಹಾರದ ರಾಜಕೀಯ ಹೋರಾಟ ಮತ್ತಷ್ಟು ಚುರುಕುಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಬಣದ ವಿರುದ್ಧ ತೇಜಸ್ವಿ ಯಾದವ್ ನೇತೃತ್ವದ ಇಂಡಿಯಾ ಬಣವು ನೇರ ಸ್ಪರ್ಧೆಗೆ ಸಿದ್ಧತೆ ಆರಂಭಿಸಿದೆ.ಇದನ್ನು ಓದಿ –ಹಾಸನಾಂಬ ಜಾತ್ರೋತ್ಸವ ಸಂಪನ್ನ: ದಾಖಲೆ ಭಕ್ತರ ನೆರೆ ದರ್ಶನ

ತೇಜಸ್ವಿ ಯಾದವ್ ಅವರು ಹಿಂದಿನ ಚುನಾವಣೆಯಲ್ಲಿ ಯುವ ಮತದಾರರ ಬೆಂಬಲದಿಂದ ಪ್ರಮುಖ ನಾಯಕನಾಗಿ ಹೊರಹೊಮ್ಮಿದ್ದರೆ, ಈ ಬಾರಿ ಸಂಪೂರ್ಣ ವಿರೋಧ ಪಕ್ಷಗಳ ಒಕ್ಕೂಟದ ಮುಖಂಡರಾಗಿ ಸ್ಪರ್ಧಿಸುವ ಮೂಲಕ ಬಿಹಾರ ರಾಜಕೀಯದಲ್ಲಿ ಹೊಸ ಶಕ್ತಿ ಕೇಂದ್ರವಾಗಿ ಹೊರಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ.

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
ಗುಜರಾತ್‌ನಲ್ಲಿ ಸೇತುವೆ ಕುಸಿತ – ಐದು ವಾಹನ ನದಿಗೆ, ಮೂವರು ದುರ್ಮರಣ
ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು
ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
TAGGED:Bihar electionbreakingnewslatestnewsಇಂಡಿಯಾತೇಜಸ್ವಿ ಯಾದವ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ

Team Varthaman
Team Varthaman
August 25, 2025
ಬೆಟ್ಟಿಂಗ್ ದಂಧೆ : ಚಿತ್ರದುರ್ಗ ಶಾಸಕ ಪಪ್ಪಿಗೆ ಜಾಮೀನು
ಕಮರ್ಷಿಯಲ್ LPG ಸಿಲಿಂಡರ್ ದರ ₹195 ಏರಿಕೆ
ಬೆಂಗಳೂರುದಲ್ಲಿ ಪತ್ನಿ ಕೊಲೆ: ಪೊಲೀಸ್ ಠಾಣೆಗೆ ಶರಣಾದ ಪತಿ
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ ಸಿದ್ದರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?