ಬೆಂಗಳೂರು: ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ–ಜೆಡಿಎಸ್ ಮೈತ್ರಿ ಅಟಲ್ ಆಗಿ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ–ಜೆಡಿಎಸ್ ಮೈತ್ರಿಯ ಬಗ್ಗೆ ಮಾತನಾಡಿದರು. “ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಸೇರಿ ಯಾವ ಚುನಾವಣೆಯಾದರೂ ಈ ಮೈತ್ರಿ ಮುಂದುವರಿಯುತ್ತದೆ. ಯಾವುದೇ ಕಾರಣಕ್ಕೂ ಈ ಮೈತ್ರಿಗೆ ಧಕ್ಕೆ ಬರುವುದಿಲ್ಲ,” ಎಂದು ಅವರು ಹೇಳಿದ್ದಾರೆ.
ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ತಮ್ಮ ಸಂಬಂಧವನ್ನು ಉಲ್ಲೇಖಿಸಿ, “ಕಳೆದ 10 ವರ್ಷಗಳಲ್ಲಿ ನಾನು ಮೋದಿಯವರ ಬಗ್ಗೆ ಲಘುವಾಗಿ ಮಾತನಾಡಿಲ್ಲ. ನಮ್ಮ ಅವರ ಸಂಬಂಧ ಬಲವಾದದ್ದು. ಇದುವೇ ಬಿಜೆಪಿ–ಜೆಡಿಎಸ್ ಮೈತ್ರಿಗೆ ಆಧಾರವಾಗಿದೆ,” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇವೇಗೌಡರು, “ಅವರಿಗೆ ಸ್ವಲ್ಪ ಆರೋಗ್ಯ ಸಮಸ್ಯೆ ಇತ್ತು. ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಯಾವುದೇ ತೊಂದರೆ ಇಲ್ಲ. ವಿದೇಶದಿಂದ ಬಂದ ವೈದ್ಯರು ಸಹ ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ – ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಯ ಅರ್ಧ ಕಳೆಬರ ಪತ್ತೆ – ಬೇಟೆ ಶಂಕೆ
ಶೀಘ್ರದಲ್ಲೇ ಕುಮಾರಸ್ವಾಮಿಯವರು ರಾಜ್ಯದ ಪ್ರವಾಸಕ್ಕೆ ತೆರಳಲಿದ್ದಾರೆ,” ಎಂದು ಘೋಷಿಸಿದರು.








