ಮಂಡ್ಯ: ಈಜಲು ಹೋಗಿದ್ದ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಪೃಥ್ವಿನ್ (15) ಎಂದು ಗುರುತಿಸಲಾಗಿದೆ. ಇವರು ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರರಾಗಿದ್ದು, ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದರು.
ಶಾಲೆಗೆ ರಜೆ ಇದ್ದ ಕಾರಣ ಭಾನುವಾರ ಮಧ್ಯಾಹ್ನ ನಾಲ್ವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದರು. ಆದರೆ ಸಂಜೆಯವರೆಗೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದರು.
ನಂದೀಪುರ ಗ್ರಾಮದ ರಾಜೇಗೌಡ ಅವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಸೋಮವಾರ ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ.ಇದನ್ನು ಓದಿ –ಇರಾನ್ ಯುದ್ಧದ ಪರಿಣಾಮ: ಚಿನ್ನ–ಬೆಳ್ಳಿ ದರದಲ್ಲಿ ಭಾರೀ ಇಳಿಕೆ
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








