- ರೌಡಿಶೀಟರ್ ಪಟ್ಟಿಗೆ ಸೇರಿಸುವ ಬೆದರಿಕೆ
ಮಂಡ್ಯ: ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ 5,000 ರೂ. ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೆಬಲ್ ವೆಂಕಟೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಎಂಬ ವ್ಯಕ್ತಿಯಿಂದ ವೆಂಕಟೇಶ್ ಲಂಚ ಬೇಡಿಕೆ ಇಟ್ಟಿದ್ದರು. ನವೀನ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ನಂತರ, ದಾಳಿ ನಡೆಸಲು ಯೋಜನೆ ರೂಪಿಸಲಾಯಿತು.
ಗುರುವಾರ ರಾತ್ರಿ ಪೊಲೀಸ್ ಠಾಣೆಯ ಎದುರಿನ ಹೋಟೆಲ್ ಬಳಿ ವೆಂಕಟೇಶ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಲೆ ಬೀಸಿ ಬಂಧಿಸಿದರು.ಇದನ್ನು ಓದಿ –ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ಶೇ.65.08 ಮತದಾನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.








