ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಅವಘಡ ಸಂಭವಿಸಿದ್ದು, 18 ಪ್ರಯಾಣಿಕರಿದ್ದ ಒಂದು ಖಾಸಗಿ ಬಸ್ ಅಲಕಾನಂದ ನದಿಗೆ ಉರುಳಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ.
ಘಟನೆಯ ನಂತರ ಎಂಟು ಜನರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದು, ಗಾಯಗೊಂಡ ಕೆಲವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಘಟನೆಯು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಸ್ಥಳದಲ್ಲಿ ಪೊಲೀಸರು, ಜಿಲ್ಲಾಡಳಿತ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಪತ್ತೆಯಾದವರಿಗಾಗಿ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.ಇದನ್ನು ಓದಿ –ಸರ್ಕಾರಿ ಆಡಳಿತದಲ್ಲಿ ಕನ್ನಡ ಕಡ್ಡಾಯ
ಸರ್ಕಾರ, ಜನರಲ್ಲಿ ಆತಂಕ ಮೂಡದಂತೆ ವದಂತಿಗಳನ್ನು ಹರಡಬಾರದು ಎಂಬ ಮನವಿಯನ್ನೂ ಮಾಡಿದೆ. ಶೀಘ್ರದಲ್ಲಿಯೇ ಎಲ್ಲಾ ನಾಪತ್ತೆಯಾದವರ ಪತ್ತೆಗಾಗಿ ಗಟ್ಟಿಯಾದ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.