- – ಸಾರಿಗೆ ನೌಕರರ ಮುಷ್ಕರ ಘೋಷಣೆ
ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಅನಂತ ಸುಬ್ಬರಾವ್ ಅವರು, ನಾಳೆ ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನಾಳೆ ಬೆಳಗ್ಗೆ 6ರಿಂದ ಯಾವುದೇ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆದು ಸಂಚಾರಕ್ಕೆ ಬಿಡುವುದಿಲ್ಲ. ನೌಕರರು ಬಸ್ ಓಡಿಸುವುದಿಲ್ಲ. ಸರ್ಕಾರದ ಬೆದರಿಕೆಗೆ ಹೆದರದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ” ಎಂದು ನೌಕರರಿಗೆ ಕರೆ ನೀಡಿದರು.
ಈ ಮುಷ್ಕರದ ಕುರಿತು ಈಗಾಗಲೇ 22 ದಿನಗಳ ಹಿಂದೆ ಸರ್ಕಾರಕ್ಕೆ ನೋಟಿಸ್ ನೀಡಲಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯವಾಗಿ ಸಭೆ ಕರೆದಿದ್ದು, ಅದು ತಡವಾಗಿ ನಡೆದಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಸಂಘಟನೆಗಳು 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರೂ, ಕನಿಷ್ಠ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಬಹುದಾಗಿತ್ತು ಎಂದ ಅವರು, ವೇತನ ಶೇಕಡಾ 15ರಷ್ಟು ಹೆಚ್ಚಳ ಹಾಗೂ ಬಾಕಿ ಇರುವ ಹಣವನ್ನು ಆದಷ್ಟು ಬೇಗ, ಕನಿಷ್ಠ ಕಂತು ರೂಪದಲ್ಲಾದರೂ ಕೊಡಬೇಕೆಂದು ಮನವಿ ಮಾಡಿದ್ದೇವೆ. ಆದರೆ ಸರಿಯಾದ ಸ್ಪಂದನೆ ಲಭ್ಯವಾಗದ ಕಾರಣ, ಅಧಿವೇಶನದವರೆಗೆ ಮುಷ್ಕರ ಮುಂದೂಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.ಇದನ್ನು ಓದಿ –ದಸರಾ-2025 ಗಜಪಯಣಕ್ಕೆ ಚಾಲನೆ
ಹೀಗಾಗಿ, ನಾಳೆ (ಆ.5) ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರ್ವಜನಿಕ ಬಸ್ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.