ಬೆಂಗಳೂರು: ಖ್ಯಾತ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಅವರ ಸಾವಿನ ಹಿಂದಿನ ಕೆಲ ಕಾರಣಗಳು ಮೇಲ್ನೋಟಕ್ಕೆ ಬಹಿರಂಗವಾಗಿವೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ತನಿಖೆಯಲ್ಲಿ ಒಂದೇ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂಬುದು ಬೆಳಕಿಗೆ ಬಂದಿದೆ. ವೈಭವಯುತ ಜೀವನಶೈಲಿ, ಮಾನಸಿಕ ಒತ್ತಡ ಹಾಗೂ ವ್ಯವಹಾರ ಸಂಬಂಧಿತ ಸಮಸ್ಯೆಗಳು ಸೇರಿದಂತೆ ಹಲವು ಅಂಶಗಳು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.
ಇನ್ನೂ ಹೆಚ್ಚಿನ ಮಾಹಿತಿಗಾಗಿ, ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿಯಲ್ಲಿ ಪತ್ತೆಯಾದ ಡೈರಿ, ಬಳಸಿದ ಪಿಸ್ತೂಲ್, ಮೊಬೈಲ್ ಫೋನ್, ಲಾಕರ್ ಸೇರಿದಂತೆ 30ಕ್ಕೂ ಹೆಚ್ಚು ವಸ್ತುಗಳನ್ನು ಫರೆನ್ಸಿಕ್ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ. ಮುಂದಿನ ವಾರದೊಳಗೆ ವರದಿ ಎಸ್‌ಐಟಿ ಕೈ ಸೇರಲಿದೆ.ಇದನ್ನು ಓದಿ –ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಅಂತಿಮ ವರದಿ ಸಲ್ಲಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತಿದ್ದಾರೆ.








