By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ
BengaluruKarnatakaPolitics

ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ

Team Varthaman
Last updated: July 14, 2026 11:21 AM
Team Varthaman
Published: July 14, 2026
Share
SHARE

ಬೆಂಗಳೂರು: ಆಗಸ್ಟ್‌ 6ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೈಕಮಾಂಡ್‌ನಿಂದ ಸಮಯ ದೊರೆತ ತಕ್ಷಣ ದೆಹಲಿಗೆ ತೆರಳಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೂರು–ನಾಲ್ಕು ದಿನಗಳಲ್ಲಿ ಹೈಕಮಾಂಡ್‌ ನಾಯಕರು ಸಮಯ ನೀಡಲಿದ್ದಾರೆ. ಸಮಯ ನಿಗದಿಯಾದ ಕೂಡಲೇ ದೆಹಲಿಗೆ ತೆರಳುತ್ತೇನೆ. ಅಲ್ಲಿಯೂ ಕೆಲವು ಅಧಿಕೃತ ಕೆಲಸಗಳಿವೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಪೂರ್ಣಗೊಳಿಸುವ ಉದ್ದೇಶವಿದೆ” ಎಂದು ತಿಳಿಸಿದರು.

Contents
    • ಬೆಂಗಳೂರು: ಆಗಸ್ಟ್‌ 6ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೈಕಮಾಂಡ್‌ನಿಂದ ಸಮಯ ದೊರೆತ ತಕ್ಷಣ ದೆಹಲಿಗೆ ತೆರಳಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು.
      • ಸಚಿವ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ
  • ಶೀಘ್ರದಲ್ಲೇ ಅಂತಿಮ ನಿರ್ಧಾರ: ಖರ್ಗೆ
Join WhatsApp Group

ಜೂನ್‌ 3ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಸರ್ಕಾರ ರಚನೆಯಾಗಿ ಒಂದೂವರೆ ತಿಂಗಳು ಕಳೆದರೂ ಸಂಪೂರ್ಣ ಸಚಿವ ಸಂಪುಟ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ.

ಸಚಿವ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ

ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರು, ಮಾಜಿ ಸಚಿವರು, ಮೊದಲ ಬಾರಿಗೆ ಆಯ್ಕೆಯಾದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಹಿಳಾ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೆಚ್ಚಾಗಿದೆ.

ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ತಮ್ಮ ಬೆಂಬಲಕ್ಕೆ ನಿಂತಿದ್ದವರಿಗೆ ಸಚಿವ ಸ್ಥಾನ ಕಲ್ಪಿಸಲು ಮುಖ್ಯಮಂತ್ರಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರು ಹಾಗೂ ಮಾಜಿ ಸಚಿವರು ಕೂಡ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಅವರ ಮೂಲಕ ಹೈಕಮಾಂಡ್‌ಗೆ ಶಿಫಾರಸು ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೂಡ ತಮ್ಮ ಬೆಂಬಲಿಗರಿಗೆ ಅವಕಾಶ ದೊರಕಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಅಂತಿಮ ನಿರ್ಧಾರ: ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಶಾಸಕರಾದ ಟಿ.ಡಿ. ರಾಜೇಗೌಡ, ಅಶೋಕ ಪಟ್ಟಣ ಹಾಗೂ ಕೆ.ಎಂ. ಶಿವಲಿಂಗೇಗೌಡ ಭೇಟಿ ನೀಡಿ, ಸಂಪುಟ ವಿಸ್ತರಣೆಯಲ್ಲಿ ತಮ್ಮನ್ನು ಪರಿಗಣಿಸುವಂತೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಖರ್ಗೆ, “ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಬೇಗ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.

ಶಾಸಕ ಅಶೋಕ ಪಟ್ಟಣ ಮಾತನಾಡಿ, “ಸಚಿವ ಸಂಪುಟವನ್ನು ಆದಷ್ಟು ಬೇಗ ವಿಸ್ತರಿಸುವಂತೆ ಮನವಿ ಮಾಡಿದ್ದೇವೆ. ರಾಜ್ಯ ನಾಯಕರು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ದೆಹಲಿಗೆ ತೆರಳುವ ಸಾಧ್ಯತೆ ಇದೆ” ಎಂದು ತಿಳಿಸಿದರು.ಇದನ್ನು ಓದಿ –UG-CET ಮೊದಲ ಸುತ್ತಿನ ಫಲಿತಾಂಶ ಪ್ರಕಟ

ಜಾತಿಗಿಂತ ಪಕ್ಷದ ನಿಷ್ಠೆ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಪಕ್ಷದ ಹಿರಿಯ ನಾಯಕರಿಗೆ ಮನವಿ ಮಾಡಿರುವುದಾಗಿ ಅವರು ಹೇಳಿದರು.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
KRS ಜಲಾಶಯಕ್ಕೆ ಸೋಮವಾರ ಬಾಗೀನ ಅರ್ಪಣೆ
ಶಾಲಿನಿ ರಜನೀಶ್ ಬಗ್ಗೆ ಅಸಭ್ಯ ಹೇಳಿಕೆ: MLC ರವಿಕುಮಾರ್ ವಿರುದ್ಧ FIR ದಾಖಲು
ಇಂದಿನಿಂದ 5 ದಿನಗಳ ಕಾವೇರಿ ಆರತಿ ಆರಂಭ
ರಾಜ್ಯದ ಹಲವು ಜಿಲ್ಲೆಗಳಲ್ಲಿಭಾರಿ ಮಳೆಯ ಮುನ್ಸೂಚನೆ
ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
TAGGED:breakingnewsDK shivkumarlatestnewsಸಂಪುಟ ವಿಸ್ತರಣೆಹೈಕಮಾಂಡ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main News

ಮಾ.3ರಂದು ರಕ್ತಚಂದ್ರಗ್ರಹಣ; ರಾಜ್ಯದಲ್ಲಿ 25 ನಿಮಿಷ ಗೋಚರ

Team Varthaman
Team Varthaman
February 28, 2026
ಗಿಳಿಶಾಸ್ತ್ರ ವಂಚನೆ : 35 ಲಕ್ಷ ಚಿನ್ನಾಭರಣ ದೋಚಿದ ಗಿಳಿರಾಮ
ಇಂದಿನಿಂದ 2025–26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ
ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಭಾರತ
ರಾಜ್ಯದ ಹಲವು ಭಾಗಗಳಲ್ಲಿ ಮಳೆ: ಸಿಡಿಲಿಗೆ ಇಬ್ಬರು ಬಲಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?