By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಸಚಿವ ಸಂಪುಟ ವಿಸ್ತರಣೆ: ಸುಳಿವು ಕೊಟ್ಟ ಸಿಎಂ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಸಚಿವ ಸಂಪುಟ ವಿಸ್ತರಣೆ: ಸುಳಿವು ಕೊಟ್ಟ ಸಿಎಂ
KarnatakaMysorePolitics

ಸಚಿವ ಸಂಪುಟ ವಿಸ್ತರಣೆ: ಸುಳಿವು ಕೊಟ್ಟ ಸಿಎಂ

Team Varthaman
Last updated: November 3, 2025 7:29 PM
Team Varthaman
Published: November 3, 2025
Share
SHARE

ಮೈಸೂರು: ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನಾರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು. ನ೧೫ಕ್ಕೆ ನವದೆಹಲಿ ಹೋಗಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಬಿಹಾರದ ಮುಖಂಡರು ಪ್ರಚಾರದ ವೇಳೆ ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಇದ್ದರೂ, ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿಲ್ಲ. ಹೈಕಮಾಂಡ್ ಬಿಟ್ಟು ಬೇರೆ ಯಾರೇ ಮಾತನಾಡಿದರೂ ಕಿಮ್ಮತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದವವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಬಿಹಾರ ಚುನಾವಣೆಯಲ್ಲಿ ಅಲ್ಲಿನ ಅಧಿಕಾರ ವಿರೋಧಿ ಅಲೆ, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ ಎಂದು ಸಿಎಂ ಹೇಳಿದರು.

Join WhatsApp Group

ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೋರಲಾಗುವುದು.ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳೂ 2000 ರೂ. ಗೃಹಲಕ್ಷ್ಮಿ ಹಣ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ನಿತೀಶ್ ಕುಮಾರ್ ಹಲವು ವರ್ಷಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲರೊಂದಿಗೂ ಮೈತ್ರಿ ಮಾಡಿಕೊಳ್ಳುವ ಅವರಿಗೆ ಯಾವುದೇ ರಾಜಕೀಯ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತ ಚಲಾಯಿಸುವ ಭರವಸೆಯಿದೆ ವಿಶ್ವಾಸ ವ್ಯಕ್ತಪಡಿಸಿದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ, ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ.ಇದನ್ನು ಓದಿ –ವಿಶ್ವಕಪ್ ಗೆದ್ದ ಮಹಿಳಾ ಕ್ರಿಕೆಟಿಗರಿಗೆ ವಜ್ರಾಭರಣ

ಹುಲಿ ದಾಳಿ ಪ್ರಕರಣದ ಬಗ್ಗೆ ಸಿಎಂ ಸಭೆ: ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಸಿಎಂ, ”ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು. ಸಚಿವರಾದ ಎಚ್‌.ಸಿ.ಮಹದೇವಪ್ಪ. ಕೆ.ವೆಂಕಟೇಶ್‌, ವಿಧಾನ ಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ನಗರಾಧ್ಯಕ್ಷ ಆರ್.ಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.

  • ಮುಂಗಾರು ಅಬ್ಬರ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
  • ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
    by Team Varthaman
  • ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
    by Team Varthaman
  • ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
    by Team Varthaman
  • UG-CET ಫಲಿತಾಂಶ ಪ್ರಕಟ; 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭ್ಯ
    by Team Varthaman
ರಾಜ್ಯದಲ್ಲಿ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ
ದಾಖಲೆ ಮುರಿಯಲು ರಾಜಕೀಯ ಮಾಡಿಲ್ಲ:ಸಿಎಂ ಸಿದ್ದರಾಮಯ್ಯ
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್
ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
TAGGED:Cabinet expansionKarnataka GovtlatestnewsSiddaramaiahಸಂಪುಟ ವಿಸ್ತರಣೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main NewsTrending

ಅಹಮದಾಬಾದ್ ವಿಮಾನ ದುರಂತ: ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

Team Varthaman
Team Varthaman
June 13, 2025
ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಶವವಾಗಿ ಪತ್ತೆ
ಯೋಗಾ ಯೋಗ..
ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ
ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?