ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾದ ಬಾಬು ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ, ತಮ್ಮ ಸಾವಿಗೆ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಕಾರಣ ಎಂದು ಬಾಬು ಉಲ್ಲೇಖಿಸಿದ್ದಾರೆ.
ಬಾಬು ಅವರ ಪತ್ನಿ ಶಿಲ್ಪಾ ನೀಡಿದ ದೂರಿನ ಆಧಾರದ ಮೇಲೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಎ1 ಆರೋಪಿಯಾಗಿ ಸಂಸದ ಡಾ. ಕೆ. ಸುಧಾಕರ್, ಎ2 ನಾಗೇಶ್, ಮತ್ತು ಎ3 ಮಂಜುನಾಥ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 108, 352, 351(2) ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯ ಸೆಕ್ಷನ್ 3(2)(v) ಅಡಿ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ: ಆರೋಪಿಗಳು ಸರ್ಕಾರಿ ಉದ್ಯೋಗ ಕೊಡಿಸುವ ಹೆಸರಿನಲ್ಲಿ ಬಾಬು ಅವರಿಂದ ₹25 ಲಕ್ಷ ಹಣ ವಸೂಲಿ ಮಾಡಿ, ಕೆಲಸ ಮಾಡಿಕೊಡದೆ ಮೋಸ ಮಾಡಿದ್ದಾರೆ. ಕೆಲಸ ವಿಚಾರಿಸಿದಾಗ ನಿಂದನೆ ಮಾಡಿ, ಬೆದರಿಕೆ ಹಾಕಿ, ಮಾನಸಿಕ ಹಿಂಸೆ ನೀಡಿದ ಪರಿಣಾಮ ಬಾಬು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಿಲ್ಪಾ ದೂರಿನಲ್ಲಿ ತಿಳಿಸಿದ್ದಾರೆ.ಇದನ್ನು ಓದಿ –ಹಳೆ ಪಿಂಚಣಿ ಯೋಜನೆ ಜಾರಿಗೆ ಸಾದ್ಯತೆ – ಆಗಸ್ಟ್ 12ರಂದು ಮಹತ್ವದ ಸಭೆ
ಆರೋಪಗಳು ಹಣ ವಂಚನೆ, ಬೆದರಿಕೆ, ಮಾನಸಿಕ ಹಿಂಸೆ, ನಿಂದನೆ, ಆತ್ಮಹತ್ಯೆಗೆ ಪ್ರೇರಣೆ ಮತ್ತು ದಲಿತನ ಮೇಲೆ ದೌರ್ಜನ್ಯ ಸೇರಿದಂತೆ ಹಲವು ಗಂಭೀರ ಅಂಶಗಳನ್ನು ಒಳಗೊಂಡಿವೆ.