ಶಿವಮೊಗ್ಗ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ರಿಯಾಜ್ ಅಹಮದ್ ಮತ್ತು ಫಾತಿಮಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರಿನ ಚಾಲಕ, ಪಕ್ಕದ ಸೀಟಿನಲ್ಲಿದ್ದ ಮಹಿಳೆ ಹಾಗೂ ಮಗು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದ ವೇಳೆ, ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೂ ಹಾನಿಯಾಗಿದೆ.ಇದನ್ನು ಓದಿ –ಅಧಿಕಾರ ಹಂಚಿಕೆ ಮಾದ್ಯಮ ಸೃಷ್ಠಿ: ಸಿಎಂ ಸಿದ್ಧರಾಮಯ್ಯ
ಮೃತದೇಹಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.








