ಸುಳ್ಯ (ದಕ್ಷಿಣ ಕನ್ನಡ): ಮಡಿಕೇರಿ ತಾಲೂಕಿನ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ದುರ್ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಶಿಬ್ ಹಾಗೂ ರಿಶು ಎಂದು ಗುರುತಿಸಲಾಗಿದೆ.
ಈ ಯುವಕರು ಉಳ್ಳಾಲದಿಂದ ಕಾರಿನಲ್ಲಿ ಕೊಡಗು ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೊಯನಾಡು ಬಳಿ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಪರಿಣಾಮ, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತದೇಹಗಳನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಕೋಡಗು ಜಿಲ್ಲೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಈ ಅಪಘಾತದ ಹಿನ್ನೆಲೆಯಲ್ಲಿ ದಟ್ಟಣೆಯು ನಿರ್ಮಾಣವಾಗಿದ್ದು, ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತವಾಯಿತು.