- ಡಿಜಿಟಲ್ ವ್ಯವಸ್ಥೆಗೆ ಎನ್‌ಎಚ್‌ಎಐ ಚಿಂತನೆ
ನವದೆಹಲಿ: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಏಪ್ರಿಲ್ 1ರಿಂದ ನಗದು ವಹಿವಾಟು ಸ್ಥಗಿತಗೊಳಿಸುವ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸುತ್ತಿದೆ. ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ.
ಹೊಸ ನಿಯಮ ಜಾರಿಯಾದರೆ ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರ ಟೋಲ್ ಪಾವತಿಸಬೇಕಾಗುತ್ತದೆ. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳು ಯುಪಿಐ ಮೂಲಕ ಪಾವತಿಸುವಾಗ 1.25 ಪಟ್ಟು ಹೆಚ್ಚುವರಿ ಶುಲ್ಕ ಭರಿಸಬೇಕಾಗುತ್ತದೆ.
ಇದನ್ನು ಓದಿ –ಮುಡಾ ಪ್ರಕರಣ: ಸ್ನೇಹಮಯಿ ಕೃಷ್ಣ ಬಂಧನ
ಟೋಲ್ ಪ್ಲಾಜಾಗಳಲ್ಲಿ ದಟ್ಟಣೆ ಕಡಿಮೆ ಮಾಡಿ, ಪಾರದರ್ಶಕತೆ ಮತ್ತು ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.







