By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಅಂಕಗಳಿಗಿಂತ ಅಚೀವ್ಮೆಂಟ್ ದೊಡ್ಡದು”
    April 24, 2026
    ಹಳ್ಳಿಗಳ ಪಾಲಿನ ನಡೆದಾಡುವ ಸಂಜೀವಿನಿ
    April 22, 2026
    ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ತಡೆಗಳು ಹಾಗೂ ಪರಿಹಾರಗಳು
    April 21, 2026
    ನಮ್ಮ ಮಕ್ಕಳ ಶಿಕ್ಷಣ
    April 20, 2026
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
  • Sports
  • National
  • International
  • Crime
Reading: CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ
BengaluruKarnataka

CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ

Team Varthaman
Last updated: April 24, 2026 10:49 AM
Team Varthaman
Published: April 24, 2026
Share
SHARE

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಯಿಸಿ ಪರೀಕ್ಷೆಗೆ ಅವಕಾಶ ನೀಡಿದರು ಎಂಬ ಗಂಭೀರ ಆರೋಪ ವ್ಯಕ್ತವಾಗಿದೆ.

ಗುರುವಾರ ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ತಡೆದು, ಜನಿವಾರ ತೆಗೆಯುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಸಿಬ್ಬಂದಿ ಎಚ್ಚರಿಕೆ ನೀಡಿದರೆಂದು ಆರೋಪಿಸಲಾಗಿದೆ.

Join WhatsApp Group

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರ ತೆಗೆಯಿಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹಾಗೂ ಸಿಇಟಿ ಸೆಲ್ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರಿಗೆ ಮನವೊಲಿಸಲು ಅಧಿಕಾರಿಗಳು ಪ್ರಯತ್ನಿಸಿದ್ದು, ದೂರು ನೀಡಬೇಡಿ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಘಟನೆಗೆ ಪೋಷಕರು ಹಾಗೂ ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕ್ರಮಗಳು ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆಇದನ್ನು ಓದಿ -.“ಅಂಕಗಳಿಗಿಂತ ಅಚೀವ್ಮೆಂಟ್ ದೊಡ್ಡದು”

ಕಳೆದ ವರ್ಷವೂ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಿಸಿದ ಘಟನೆಗಳು ವಿವಾದಕ್ಕೆ ಕಾರಣವಾಗಿದ್ದವು. ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಇದೇ ರೀತಿಯ ಪ್ರಕರಣಗಳು ನಡೆದಿದ್ದವು. ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿತ್ತು.

  • ಮೆಟ್ರೋ ಬಳಸುವ ಉದ್ಯೋಗಿಗಳಿಗೆ ತಿಂಗಳಿಗೆ ಪ್ರೋತ್ಸಾಹಧನ
    by Team Varthaman
    April 24, 2026
  • CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ
    by Team Varthaman
    April 24, 2026
  • “ಅಂಕಗಳಿಗಿಂತ ಅಚೀವ್ಮೆಂಟ್ ದೊಡ್ಡದು”
    by Team Varthaman
    April 24, 2026
  • ಸಿಡಿಲು ಬಡಿದು ಇಬ್ಬರು ರೈತರು ಸಾವು
    by Team Varthaman
    April 24, 2026
  • ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
    by Team Varthaman
    April 23, 2026
ಗೌರಿ-ಗಣೇಶ ಹಬ್ಬ : ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ
ಬಕೆಟ್ ನಲ್ಲಿ ಮುಳುಗಿ ಮಗು ಸಾವು: ಮನನೊಂದ ತಾಯಿ ಆತ್ಮಹತ್ಯೆ
TAGGED:CETCET controversyCET Examಜನಿವಾರಜನಿವಾರ ಪ್ರಕರಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

ಇರಾನ್ ಯುದ್ಧದ ಪರಿಣಾಮ: ಚಿನ್ನ–ಬೆಳ್ಳಿ ದರದಲ್ಲಿ ಭಾರೀ ಇಳಿಕೆ

Team Varthaman
Team Varthaman
March 23, 2026
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವರದಿ
ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ :ಈಶ್ವರ ಖಂಡ್ರೆ
ಸರ್ಕಾರದ ವೈಫಲ್ಯ ಮುಚ್ಚಲು ಸರ್ಕಾರದ ತಂತ್ರ: ಪ್ರತಾಪಸಿಂಹ
IPL 2025 – ಆರ್‌ಸಿಬಿಗೆ ಶುಭಾರಂಭ, ಹಾಲಿ ಚಾಂಪಿಯನ್‌ ಕೆಕೆಆರ್‌ಗೆ ಸೋಲು!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?