ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET) ಫಲಿತಾಂಶವನ್ನು ನಾಳೆ (ಮೇ 24, ಶನಿವಾರ) ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ.
ಬೆಳಿಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಪರಿಶೀಲಿಸಬಹುದಾಗಿದೆ:
🔗 https://cetonline.karnataka.gov.in/ugcetrank2025/checkresult.aspx
🔗 https://karresults.nic.in
ಇದನ್ನು ಓದಿ –ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ
ವಿದ್ಯಾರ್ಥಿಗಳು ತಮ್ಮ ದಾಖಲೆ ಸಂಖ್ಯೆಯನ್ನು ಬಳಸಿ ಈ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪಡೆಯಬಹುದು.