- – ನಾಲ್ವರಿಗೆ ಗಂಭೀರ ಗಾಯ
ಬೆಂಗಳೂರು: ನಗರದ ಪೀಣ್ಯ 2ನೇ ಹಂತದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗೆ ಸಿಲುಕಿ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯು ಬೆಳಗ್ಗೆ 8:45ರ ಸುಮಾರಿಗೆ ನಡೆದಿದೆ.
ಬಸ್ ರಾಪಟೆಯಲ್ಲಿ ಹರಿದ ಪರಿಣಾಮ, ಒಬ್ಬ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಾಗಿದೆ.
ಪೀಣ್ಯ ಪ್ರದೇಶದಲ್ಲಿ ಜನಸಂಚಾರ ಹೆಚ್ಚಿರುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ ಮಳೆಯ ಅರ್ಭಟ: ಕೊಡಗಿಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ
ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ಸಾರ್ವಜನಿಕರ ಆಕ್ರೋಶ ಹಾಗೂ ಬಿಎಂಟಿಸಿ ಬಸ್‌ಗಳ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳನ್ನು ಈ ಘಟನೆ ಮತ್ತೊಮ್ಮೆ ಎಬ್ಬಿಸಿದೆ.