By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಚಿತ್ರದುರ್ಗ ಅಪಘಾತ: ಬಸ್‌ಗೆ ಲಾರಿ ಡಿಕ್ಕಿ, 6 ಮಂದಿ ಸಜೀವ ದಹನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Chitradurga > ಚಿತ್ರದುರ್ಗ ಅಪಘಾತ: ಬಸ್‌ಗೆ ಲಾರಿ ಡಿಕ್ಕಿ, 6 ಮಂದಿ ಸಜೀವ ದಹನ
ChitradurgaKarnataka

ಚಿತ್ರದುರ್ಗ ಅಪಘಾತ: ಬಸ್‌ಗೆ ಲಾರಿ ಡಿಕ್ಕಿ, 6 ಮಂದಿ ಸಜೀವ ದಹನ

Team Varthaman
Last updated: December 25, 2025 7:31 PM
Team Varthaman
Published: December 25, 2025
Share
SHARE

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಗೊರ್ಲತ್ತು ಕ್ರಾಸ್ ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದು 6 ಮಂದಿ ಸಜೀವ ದಹನವಾಗಿದ್ದಾರೆ.


ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಖಾಸಗಿ ಬಸ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಂಟೇನರ್ ಲಾರಿ ರಸ್ತೆ ಬ್ಯಾರಿಕೇಡ್‌ಗಳನ್ನು ದಾಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್ ಒಡೆದು ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬಸ್‌ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಐವರು ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಲವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದೆ. ಅಪಘಾತದ ಕಾರಣ ಹಾಗೂ ಪರಿಸ್ಥಿತಿಗಳ ಕುರಿತು ತನಿಖೆ ಕೈಗೊಳ್ಳಲಾಗಿದೆ.

Join WhatsApp Group


ಅಪಘಾತದ ಸಮಯದಲ್ಲಿ ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಬಸ್‌ನ ಹಿಂದೆ ದಾಂಡೇಲಿಗೆ ತೆರಳುತ್ತಿದ್ದ 42 ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ ಕೂಡ ಬೆಂಕಿಗೆ ಸಿಲುಕಿತು. ಚಾಲಕನ ಚಾತುರ್ಯದಿಂದ ಶಾಲಾ ಬಸ್ ರಾಷ್ಟ್ರೀಯ ಹೆದ್ದಾರಿಯ ಬೇಲಿಯನ್ನು ದಾಟಿ ಚರಂಡಿ ದಾಟಿ ಸುರಕ್ಷಿತವಾಗಿ ನಿಂತಿತು. ಅದೃಷ್ಟವಶಾತ್, ಬಸ್‌ನಲ್ಲಿದ್ದ ಯಾವುದೇ ಮಕ್ಕಳಿಗೂ ಗಾಯಗಳಾಗಿಲ್ಲ.

ಶಾಲಾ ಮಕ್ಕಳ ಬಸ್ ಚಾಲಕ ಸಚಿನ್, “ಮಧ್ಯರಾತ್ರಿ ಸುಮಾರು 2 ಗಂಟೆಗೆ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಹಾರಿ ಬಂದು ಸ್ಲೀಪರ್ ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಗುದ್ದಿತು. ತಕ್ಷಣವೇ ಬೆಂಕಿ ಕಾಣಿಸಿಕೊಂಡು ಸ್ಫೋಟವೂ ಸಂಭವಿಸಿತು. ನಾನು ನನ್ನ ಬಸ್ಸನ್ನು ಮುಂದೆ ನಿಲ್ಲಿಸಿ, ಅಪಘಾತಕ್ಕೀಡಾದ ಬಸ್‌ನಲ್ಲಿದ್ದ ಏಳು ಜನರನ್ನು ರಕ್ಷಿಸಲು ಪ್ರಯತ್ನಿಸಿದ್ದೆ” ಎಂದು ತಿಳಿಸಿದ್ದಾರೆ.


ಸೀಬರ್ಡ್ ಬಸ್ ಮಾಲೀಕ ನಾಗರಾಜು ಮಾತನಾಡಿ, “ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್ ಡೀಸೆಲ್ ಟ್ಯಾಂಕ್‌ಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಪ್ರಯಾಣಿಕರ ಸುರಕ್ಷೆಗೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಬಸ್ ಹೊಂದಿತ್ತು. ಎರಡು ತುರ್ತು ನಿರ್ಗಮನ ದ್ವಾರಗಳೂ ಇದ್ದವು” ಎಂದು ತಿಳಿಸಿದರು.


ಬಸ್ ಕ್ಲೀನರ್ ಸಾಧಿಕ್, “ರಾತ್ರಿ 1:30 ರಿಂದ 2 ಗಂಟೆ ನಡುವೆ ಅಪಘಾತ ನಡೆದಿದೆ. ಡಿಕ್ಕಿಯ ಹೊಡೆತಕ್ಕೆ ನಾನು ಬಸ್ಸಿನಿಂದ ಹೊರ ಬಿದ್ದೆ. ಕ್ಷಣಾರ್ಧದಲ್ಲೇ ಬಸ್ ಧಗಧಗನೆ ಹೊತ್ತಿ ಉರಿಯಿತು. ಚಾಲಕನ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಸಹಾಯಕ್ಕೆ ಬಂದರು” ಎಂದು ಹೇಳಿದರು.


ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ದುರಂತದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, “ಹಲವರು ಸಜೀವ ದಹನಗೊಂಡಿರುವ ಈ ಘೋರ ಅಪಘಾತದ ಸುದ್ದಿ ಕೇಳಿ ಎದೆ ನಡುಗಿದೆ. ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ. ಅಪಘಾತದ ಕುರಿತು ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಹೇಳಿದ್ದಾರೆ.


ಪ್ರಧಾನಮಂತ್ರಿ ಸಂತಾಪ, ಪರಿಹಾರ ಘೋಷಣೆ:
ಇದೇ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್‌  ಪೋಸ್ಟ್ ಮೂಲಕ ಮಾಹಿತಿ ನೀಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ರೈತರು , ಗ್ರಾಮಸ್ಥರು
ಶಾಲಾ ಬಸ್ಸಿಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ವಂದೇ ಭಾರತ್ ರೈಲು ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
RCBಗೆ ರೋಚಕ ಜಯ, 18 ವರ್ಷಗಳ ವನವಾಸಕ್ಕೆ ಅಂತ್ಯ : ಮೊದಲ ಟ್ರೋಫಿ ಎತ್ತಿಹಿಡಿದ ವಿರಾಟ್
TAGGED:breakingnewsChitradurga accidentlatestnewsseabird bus
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChamrajnagarKarnataka

KSRTC ಬಸ್ – ಲಾರಿ ಡಿಕ್ಕಿ: ಚಾಲಕ ಸಾವು ,17 ಮಂದಿಗೆ ಗಾಯ

Team Varthaman
Team Varthaman
January 7, 2026
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಗೌಡ ವಿರುದ್ಧ ಆರ್ಮ್ಸ್ ಆಕ್ಟ್ ಅಡಿ FIR
ರೇಣುಕಾಸ್ವಾಮಿ ಕೊಲೆ: ದರ್ಶನ್ , ಪವಿತ್ರಾ ಸೇರಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಫ್ರೆಮ್
ಇಂದಿನಿಂದ ಅ. 4ರವರೆಗೆ ರಾಜ್ಯದಲ್ಲಿ ಮಳೆ ಭೀತಿ
ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?