By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
  • Sports
  • National
  • International
  • Crime
Reading: ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
BengaluruKarnataka

ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Team Varthaman
Last updated: March 20, 2026 10:01 AM
Team Varthaman
Published: March 20, 2026
Share
SHARE

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ, ಗೃಹ ಬಳಕೆದಾರರಿಗೆ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವ ಕೇಂದ್ರದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪಾಲಿಸಿದೆ ಎಂದು ಉಲ್ಲೇಖಿಸಿದ್ದಾರೆ. ಅಗತ್ಯ ಕ್ಷೇತ್ರಗಳಿಗೆ ಅನಿಲ ಹಂಚಿಕೆ ಮಾಡಲು ಕ್ರಮ ಕೈಗೊಂಡಿದ್ದರೂ, ವಾಣಿಜ್ಯ ಬಳಕೆಗೆ ಗ್ಯಾಸ್ ಕೊರತೆ ತೀವ್ರವಾಗಿದೆ ಎಂದು ಹೇಳಿದ್ದಾರೆ.

Join WhatsApp Group

ರಾಜ್ಯದಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಯಾಟರಿಂಗ್ ಸಂಸ್ಥೆಗಳು ಮತ್ತು ಪಿಜಿಗಳಿಗೆ ದಿನಕ್ಕೆ ಸುಮಾರು 50,000 ಸಿಲಿಂಡರ್‌ಗಳ ಬೇಡಿಕೆ ಇದೆ. ಆದರೆ ಕೇವಲ 1,000 ಸಿಲಿಂಡರ್‌ಗಳನ್ನು ಮಾತ್ರ ಪೂರೈಸಲಾಗುತ್ತಿದ್ದು, ಅನೇಕ ಸಂಸ್ಥೆಗಳು ಮುಚ್ಚುವ ಪರಿಸ್ಥಿತಿ ಎದುರಿಸುತ್ತಿವೆ ಎಂದು ತಿಳಿಸಿದ್ದಾರೆ.

ಈ ಕೊರತೆಯಿಂದ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು, ರೈತರು, ಡೈರಿ ಉತ್ಪಾದಕರು ಸೇರಿದಂತೆ ಆತಿಥ್ಯ ಕ್ಷೇತ್ರದ ಮೇಲೆ ಅವಲಂಬಿತ ಜನರಿಗೆ ತೊಂದರೆ ಉಂಟಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಗೃಹ ಬಳಕೆಯ ಎಲ್‌ಪಿಜಿ ಪೂರೈಕೆಗೆ ಮೇಲ್ವಿಚಾರಣೆಯ ಐಟಿ ವ್ಯವಸ್ಥೆ ಇದ್ದರೂ, ವಾಣಿಜ್ಯ ಪೂರೈಕೆಗೆ ಸಮಗ್ರ ವ್ಯವಸ್ಥೆ ಇಲ್ಲದಿರುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಆಟೊ ರಿಕ್ಷಾಗಳಿಗೂ ಎಲ್‌ಪಿಜಿ ಅಗತ್ಯವಿದ್ದು, ಅವುಗಳ ವಿತರಣೆಗೆ ಸಹ ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಪಾರದರ್ಶಕತೆ ಕೊರತೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಇದನ್ನು ಓದಿ –ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಲಾಕಪ್ ಡೆತ್ ಆರೋಪ, ಪ್ರತಿಭಟನೆ

ಶೀಘ್ರದಲ್ಲೇ ಭಾರತಕ್ಕೆ ಎರಡು ತೈಲ ಟ್ಯಾಂಕರ್‌ಗಳು ಆಗಮಿಸಲಿರುವ ಮಾಹಿತಿ ಇದ್ದು, ಇದರ ಮೂಲಕ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಬಹುದು. ಆದರೂ ರಾಜ್ಯದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ವಾಣಿಜ್ಯ ಎಲ್‌ಪಿಜಿ ಮತ್ತು ಆಟೊಗಳಿಗೆ ಅನಿಲ ಪೂರೈಕೆಯನ್ನು ಸಮರ್ಪಕವಾಗಿ ಖಚಿತಪಡಿಸಬೇಕೆಂದು ಕೇಂದ್ರಕ್ಕೆ ಸಿಎಂ ಮನವಿ ಮಾಡಿದ್ದಾರೆ.

  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
  • ಚಿಕಿತ್ಸೆ ವೇಳೆ ನೀರಾನೆ ದಾಳಿ: ಯುವ ವೈದ್ಯೆ ಸಾವು
    by Team Varthaman
  • ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    by Team Varthaman
  • ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಲಾಕಪ್ ಡೆತ್ ಆರೋಪ, ಪ್ರತಿಭಟನೆ
    by Team Varthaman
ರಾಜ್ಯದ 12 ಜಿಲ್ಲೆಗಳಲ್ಲಿ ಜು. 29ರವರೆಗೂ ಭಾರಿ ಮಳೆಯ ಮುನ್ಸೂಚನೆ
3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌
ಮೈಸೂರಿನ ಕೆ ಎಚ್ ಬಿ ಕಾಲೋನಿಯ ಗಾಯತ್ರಿ ವಿಪ್ರಸಂಘದಿಂಸ ಉಪಾಕರ್ಮ
ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
TAGGED:CM SiddaramaiahCommercial gasUnion Ministerವಾಣಿಜ್ಯ ಗ್ಯಾಸ್ಸಿಎಂ ಸಿದ್ದರಾಮಯ್ಯ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysoreTrending

ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ

Team Varthaman
Team Varthaman
June 27, 2025
ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಶಂಕಿತ ಉಗ್ರನ ಸಾವು
ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ 26% ಸುಂಕ
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ಒಬ್ಬರಿಗೆ ” ಟೇಕನ್ ಫ಼ಾರ್ ಗ್ರಾಂಟೆಡ್ ” ಆಗುವ ಮುನ್ನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?