ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ ಮಾಡಲಾಗಿದ್ದು, ಮೇ 1ರಿಂದ ಜಾರಿಗೆ ಬರುವಂತೆ ₹993 ಹೆಚ್ಚಳ ಮಾಡಲಾಗಿದೆ.
ಈ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ₹3,071.50ಕ್ಕೆ ಏರಿಕೆಯಾಗಿದೆ. ಇದಕ್ಕೂ ಮೊದಲು ಇದು ₹2,078.50 ಇತ್ತು.
ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆಯಲ್ಲಿ ₹991 ಹೆಚ್ಚಳವಾಗಿದ್ದು, ಹೊಸ ದರ ₹3,152ಕ್ಕೆ ತಲುಪಿದೆ.
ಆದರೆ, ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಜಾಗತಿಕ ಇಂಧನ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಿನ್ನೆಲೆ ಈ ದರ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.ಇದನ್ನು ಓದಿ –ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಖರ್ಗೆ
ಈ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಣ್ಣ ವ್ಯಾಪಾರಿಗಳಿಗೆ ಹೆಚ್ಚುವರಿ ಆರ್ಥಿಕ ಹೊರೆ ಉಂಟಾಗಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.








