ಬೆಂಗಳೂರು: ಬಾರ್ ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಾರ್ ಪರವಾನಿಗೆ ನೀಡಲು ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರು ಬಾರ್ ಮಾಲೀಕರಿಂದ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ಈ ಪ್ರಕರಣದ ಬೆನ್ನಲ್ಲೇ ಇದೀಗ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಲಕ್ಷ್ಮೀನಾರಾಯಣ ಎಂಬವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಬಾರ್ ಪರವಾನಿಗೆ ನೀಡಲು ಲಂಚ ಕೇಳುವ ವ್ಯವಸ್ಥೆ ಹಿಂದೆ ಸಚಿವರ ಪಾತ್ರವಿದೆ ಎಂಬ ಆರೋಪವನ್ನು ಮಾಡಿದ್ದಾರೆ.ಇದನ್ನು ಓದಿ –PUC ವಿದ್ಯಾರ್ಥಿಯ ಮೃತದೇಹ ಪತ್ತೆ: ಅನುಮಾನಾಸ್ಪದ ಸಾವು
ಬಾರ್ ಲೈಸೆನ್ಸ್ ವಿಚಾರದಲ್ಲಿ ಲಂಚದ ಬೇಡಿಕೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪುರ್ ವಿರುದ್ಧ ತನಿಖೆ ನಡೆಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.








