ಬೆಂಗಳೂರು: ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗಾಗಿ ಸಂತಸದ ಸುದ್ದಿಯೊಂದು ಬಂದಿದೆ. ಹೈಕೋರ್ಟ್‌ನ ನಿರ್ದೇಶನೆಯಂತೆ ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಹಲವು ವರ್ಷಗಳಿಂದ ಬೈಕ್ ಟ್ಯಾಕ್ಸಿ ವಿರುದ್ಧ ಹೋರಾಟ ನಡೆಸುತ್ತಿದ್ದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಜಯ ಸಿಕ್ಕಂತಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಡೆಸಲು ಅನುಮತಿ ಇರದು.
ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ಸಾರಿಗೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ. ಈ ಆದೇಶದಿಂದ ಉಬರ್, ಎಎನ್‌ಐ ಟೆಕ್ನಾಲಜೀಸ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬ್ರೇಕ್ ಬಿದ್ದಿದೆ.ಇದನ್ನು ಓದಿ –ಮಂಡ್ಯದಲ್ಲಿ ಖಾಸಗಿ ಬಸ್‌ಗೆ ಬೆಂಕಿ – 25 ಪ್ರಯಾಣಿಕರು ಅಲ್ಪಅಂತರದಲ್ಲಿ ಪಾರಾದ ರೋಚಕ ಘಟನೆ
ಇದೇ ಕುರಿತಂತೆ ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಆರು ವಾರಗಳ ಒಳಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ನ್ಯಾಯಾಲಯದ ತೀರ್ಪಿಗೆ ಸಚಿವರು ಸ್ಪಂದಿಸಿ ಸ್ವಾಗತ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.