ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.
‘ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನು ಓದಿ –₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ
ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು
ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದೇವೆ’ ಎಂದು ತಿಳಿಸಿದರು.