ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾದ ಇಬ್ಬರು ಕಾರ್ಮಿಕರು ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದರಿಂದ ಸಾವುಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ನಿನ್ನೆ ಬೆಳಗ್ಗೆ ಇದೇ ಘಟನೆಗೆ ಸಂಬಂಧಿಸಿದಂತೆ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.ಇದನ್ನು ಓದಿ –ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ
ಈ ದುರ್ಘಟನೆ ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಭೀಮನಹಳ್ಳಿ ಸಮೀಪದ ಶೆಡ್‌ನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಈ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ.








