ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನಾಗಿ ಡಿಕೆ ಶಿವಕುಮಾರ್ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಕೆಲವೇ ನಿಮಿಷಗಳಲ್ಲಿ ಪೂರ್ಣಗೊಂಡಿತು.
ಸಭೆಯ ಆರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿ, ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ ಹಿರಿಯ ನಾಯಕ ಜಿ. ಪರಮೇಶ್ವರ್ ಅನುಮೋದನೆ ನೀಡಿದರು. ಬಳಿಕ ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕರು ಕೈ ಎತ್ತುವ ಮೂಲಕ ಡಿಕೆ ಶಿವಕುಮಾರ್ ಅವರ ಆಯ್ಕೆಯನ್ನು ಒಪ್ಪಿಗೆ ಸೂಚಿಸಿದರು.
ಇದೇ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಅವರ ನಿರ್ಧಾರಕ್ಕೂ ಜಿ. ಪರಮೇಶ್ವರ್ ಬೆಂಬಲ ವ್ಯಕ್ತಪಡಿಸಿದರು.ಇದನ್ನು ಓದಿ –ಶಿವಮೊಗ್ಗ: ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ
ಸುಮಾರು ಐದು ನಿಮಿಷಗಳಲ್ಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಡಿಕೆ ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಹಾದಿ ಸುಗಮಗೊಂಡಿದೆ.








