ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಹಂತದ ಸಚಿವ ಸಂಪುಟ ರಚನೆಗೂ ಚಾಲನೆ ದೊರಕಿದೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಹಾಗೂ 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಡಾ. ಜಿ. ಪರಮೇಶ್ವರ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಇತರ ಸಚಿವರು ದೇವರು, ಸಂವಿಧಾನ ಹಾಗೂ ತಮ್ಮ ನಂಬಿಕೆಯ ಪ್ರಕಾರ ಪ್ರತಿಜ್ಞೆ ಸ್ವೀಕರಿಸಿದರು.
ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದರು.ಇದನ್ನು ಓದಿ –ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಹೊಸ ಸರ್ಕಾರದ ಮೊದಲ ಸಂಪುಟ ರಚನೆಯಾಗಿದ್ದು, ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದ ದಿಕ್ಕು ಮತ್ತು ಆದ್ಯತೆಗಳ ಬಗ್ಗೆ ಈಗ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.








