ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದಲ್ಲಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅಫ್ತಾಬ್ ಕೃಷ್ಣಾಪುರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು ಮತ್ತು ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೋಮಾ ಕೋರ್ಸ್‌ನ ವಿದ್ಯಾರ್ಥಿಯಾಗಿದ್ದ.ಇದನ್ನು ಓದಿ –ಶಾಲಾ ಬಸ್ಸಿಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ತನ್ನ ಮನೆಯಲ್ಲಿದ್ದಾಗ ಸ್ನಾನಕ್ಕೆ ಹೋಗುತ್ತಿದ್ದ ವೇಳೆ ಅಫ್ತಾಬ್‌ಗೆ ಅಜ್ಞಾತ ಕಾರಣದಿಂದ ಹೃದಯಾಘಾತ ಉಂಟಾಗಿ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಚಿಕಿತ್ಸೆಗಾಗಿ ಕರೆಕಳಿಸಿದರೂ ಅದು ಫಲಕಾರಿಯಾಗಲಿಲ್ಲ.